Breaking News

ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ : S.P.

Spread the love

ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿ ಕೊಲೆಗೀಡಾಗಿದ್ದಾರೆ. ಕಳೆದ ಬುಧವಾರ ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದರು. ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದಲ್ಲಿ ಮಹಾರಾಜರು ಹತ್ಯೆಗೀಡಾಗಿರುವುದು ಪೊಲೀಸರಿಗೆ ತಿಳಿದಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಶುಕ್ರವಾರ ಭಕ್ತರು ದೂರು ನೀಡಿದ್ದರು. ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೆವು. ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತಾಳೆ ಹಾಕಿ ತನಿಖೆ ನಡೆಸಿದೆವು. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರೆಂಬುದರ ಬಗ್ಗೆ ವಿಚಾರಣೆ ನಡೆಸಲಾಯಿತು. ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿಯ ವಿಚಾರಣೆಗೊಳಪಡಿಸಿದೆವು. ಆ ವ್ಯಕ್ತಿ ಆಶ್ರಮದಲ್ಲಿ ಮಹಾರಾಜರನ್ನು ಕೊಲೆ ಮಾಡಿ ಬೇರೆಡೆ ಶವ ಬಿಸಾಕಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಓರ್ವನನ್ನು ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಸ್ವಾಮೀಜಿ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ