Home / ರಾಜಕೀಯ / ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

Spread the love

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು.

ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು.

ಇನ್ನೂ,. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ ಹಾಲಿನ ದರ ಹೆಚ್ಚಳ ಮಾಡಿದ ಕಾರಣ ರೈತರು ಜಿಲ್ಲಾ ಒಕ್ಕೂಟಗಳಿಗೆ ಹಾಲು ಕೊಡಲು ಹಿಂದೇಟು ಹಾಕುತ್ತಿದ್ದು, ಇದರಿಂದ ಪ್ರತಿದಿನ 8 ಲಕ್ಷ ಲೀಟರ್ ನಷ್ಟು ಹಾಲು ಖಾಸಗಿಯವರ ಪಾಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ