ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ತನಿಖೆಯ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪೊಲೀಸರು ಏನು ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆದಾಗ ಯಾರೂ ಕೂಡ ತಾರತಮ್ಯ ಮಾಡಲು ಹೋಗುವುದಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸುವ ಕೆಲಸವನ್ನು ಸ್ವಾಭಾವಿಕವಾಗಿ ಮಾಡುತ್ತಾರೆ. ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಬರುವುದಿಲ್ಲ ಎಂದರು.
ಜೈನಮುನಿಗಳು ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ಹಂತಕರು ಬೋರ್ವೆಲ್ನಲ್ಲಿ ಹಾಕಿದ ದೇಹವನ್ನು ಪತ್ತೆ ಮಾಡಿ ಕ್ರಮ ಕೈಗೊಂಡಿದ್ದಾರೆ. ನಮ್ಮ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು
Laxmi News 24×7