Breaking News

ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ನೀರಲ್ಲಿ ಕೊಚ್ಚಿ ಹೋದ ಇಬ್ಬರು

Spread the love

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ.

 

ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಇಬ್ಬರು ಹೊರಟಿದ್ದರು. ಈ ವೇಳೆ, ನಿಯಂತ್ರಣ ತಪ್ಪಿ ಬೈಕ್, ಸೇತುವೆ ಮೇಲಿಂದ ನೀರಿನಲ್ಲಿ ಬಿದ್ದಿದೆ.‌ ಬ್ರಿಡ್ಜ್ ಬಳಿ ಬೈಕ್ ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆ ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಹರಿವಾಗಿದ್ದು, ಸ್ಥಳಕ್ಕೆ ಎಸ್​ಡಿಆರ್​ಎಫ್ ‌ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ನದಿಯಲ್ಲಿ ಕೊಚ್ಚಿ ಹೋಗಿರುವ ಇಬ್ಬರಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ