Breaking News

ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿ

Spread the love

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ.

ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು.

ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳು, ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳು ಸೇರಿ ಒಟ್ಟು 1,020 ಲೋಕ ಅದಾಲತ್ ಪೀಠಗಳನ್ನು ಸ್ಥಾಪಿಸಲಾಗಿತ್ತು. ಇದರಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ 2.50 ಲಕ್ಷಕ್ಕೂ ಅಧಿಕ ವ್ಯಾಜ್ಯಪೂರ್ವ ಪ್ರಕರಣಗಳು 32.25 ಲಕ್ಷ ಸೇರಿ ಒಟ್ಟು 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದರಿಂದ 1,911 ಕೋಟಿ ರೂ.ಗಳನ್ನು ಪರಿಹಾರದ ರೂಪದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

ವಿಶೇಷ ಪ್ರಕರಣಗಳು: ನ್ಯಾ.ಕೆ. ಸೋಮಶೇಖರ್ ಅವರ ಲೋಕ್ ಅದಾಲತ್ ಪೀಠದಲ್ಲಿ ಇನ್ಶೂರೆನ್ಸ್ ಪ್ರಕರಣವೊಂದರಲ್ಲಿ 1.15 ಕೋಟಿ ಪರಿಹಾರ ಕೊಡಿಸಲಾಗಿದೆ. ಬೆಂಗಳೂರು ಹೈಕೋರ್ಟ್‌ನ ಆಸ್ತಿ ಪಾಲು ಪ್ರಕರಣದಲ್ಲಿ 74 ವರ್ಷದ ಲಲಿತಮ್ಮ ಆಂಬ್ಯುಲೆನ್ಸ್‌ನಲ್ಲಿ ಬಂದು ಪರಿಹಾರ ಪಡೆದುಕೊಂಡಿದ್ದು ವಿಶೇಷವಾಗಿತ್ತು. ಹುಬ್ಬಳ್ಳಿಯಲ್ಲಿ 63 ವರ್ಷದ ಹಳೆಯ ಹಾಗೂ ಚಿತ್ರದುರ್ಗದಲ್ಲಿ 30 ವರ್ಷದ ಹಳೆಯ ಸಿವಿಲ್ ದಾವೆ, ಹೊಸದುರ್ಗದಲ್ಲಿ 13 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಜೋಡಿಯ ಪುನರ್ ಮಿಲನ ಆಗಿರುವುದು ಈ ಬಾರಿಯ ವಿಶೇಷ ಪ್ರಕರಣಗಳಾಗಿವೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ