Breaking News

ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ

Spread the love

ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ. ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಅರಿವು ಮೂಡಿಸುವುದು ಈ ದಿನದ ಗುರಿ.

ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಪ್ರಸ್ತುತ ದೇಶದಜನಸಂಖ್ಯೆ ವಿಶ್ವಸಂಸ್ಥೆಯ ದತ್ತಾಂಶದ ವರ್ಲ್ಡ್‌ಮೀಟರ್ ಪ್ರಕಾರ 1.4 ಶತಕೋಟಿ.

ಕೇವಲ ಒಂದು ರಾಷ್ಟ್ರ ಇಷ್ಟರಮಟ್ಟಿಗೆ ಜನಸಂಖ್ಯೆ ಹೊಂದಿದೆ ಎಂದಾದರೆ ವಿಶ್ವದ ಜನಸಂಖ್ಯೆ ಎಷ್ಟು ಗೊತ್ತೇ? ಪ್ರಪಂಚದಲ್ಲಿ ಒಟ್ಟು 195 ದೇಶಗಳು ವಿಶ್ವಸಂಸ್ಥೆಯ ಮಾನ್ಯತೆ ಪಡೆದಿವೆ. 1985ರಲ್ಲಿ ವಿಶ್ವದ ಜನಸಂಖ್ಯೆಯು ಸುಮಾರು 5 ಬಿಲಿಯನ್ (500 ಕೋಟಿ) ಇತ್ತು. 2023ರ ವೇಳೆಗೆ ಈ ಜನಸಂಖ್ಯೆ ಸುಮಾರು 8 ಶತಕೋಟಿಯಾಗಿದೆ (800 ಕೋಟಿ) ಎಂದು ವರದಿಗಳು ಹೇಳುತ್ತವೆ.

ಭಾರತದಲ್ಲಿ ಜನಸಂಖ್ಯೆ ನಿರಂತರವಾಗಿ ಏರುಗತಿಯಲ್ಲಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು (UNDP) ಜಗತ್ತಿನಲ್ಲಿ ಅಧಿಕ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಆಗಾಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ ಸಂಸ್ಥೆ, ಜನಸಂಖ್ಯಾ ಸ್ಫೋಟವು ಪ್ರಪಂಚದ ಮೇಲೆ ಬೀರುವ ಪರಿಣಾಮಗಳ ಕುರಿತು ಅರಿವು ಮೂಡಿಸಲು ಪ್ರತಿ ವರ್ಷ ಜುಲೈ 11ರಂದು ‘ವಿಶ್ವ ಜನಸಂಖ್ಯಾ ದಿನ’ ಆಚರಣೆ ಜಾರಿಗೆ ತಂದಿದೆ. ಹಾಗಾಗಿ ಜನಸಂಖ್ಯೆ ಹೆಚ್ಚಳದ ಪರಿಣಾಮವನ್ನು ಎತ್ತಿ ತೋರಿಸುವ, ಅರಿವು ಮೂಡಿಸುವ ವಿಶ್ವ ಜನಸಂಖ್ಯಾ ದಿನವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ