Breaking News

ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು

Spread the love

ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ; ದರೋಡೆಕೋರನಿಗೆ ಗುಂಡೇಟು

ಇಂದು ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ ಇನ್ಸ್‌ಪೆಕ್ಟರ್ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ

Spread the loveಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ