Breaking News

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕೃಷಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆ ರದ್ದು ಕುರಿತು ಮಾಧ್ಯಮಗೋಷ್ಟಿ

Spread the love

ದಾವಣಗೆರೆ: ಸಿಎಂ ಸಿದ್ದರಾಮಯ್ಯನವರು ಕೂಡು ಕೃಷಿ ಕಾಯ್ದೆ ವಾಪಸ್ ಪಡೆಯಲು ಚರ್ಚೆ ಮಾಡಿದ್ದರು.

ಅವರ ಚುನಾವಣ ಪ್ರಣಾಳಿಕೆಯಲ್ಲೂ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಲಾಗಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆ ಹಾಗು ಭೂಸುಧಾರಣಾ ಕಾಯ್ದೆ ಅತ್ಯಂತ ಅಪಾಯಕಾರಿ. ಅದನ್ನು ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯನವರು ಏಕೆ ಸದನದಲ್ಲಿ ಮುಂದಾಗಲಿಲ್ಲ, ರದ್ದುಪಡಿಸಲು ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ ಎಂದರು.

ತಕ್ಷಣ ವಾಪಸ್ ಪಡೆಯಬೇಕೆಂಬ ಬೇಡಿಕೆ ಇಟ್ಟಿದ್ದೇವೆ. 1961 ಭೂಸುಧಾರಣಾ ಕಾಯ್ದೆ ಏನಿದೆಯೋ ಇದಕ್ಕೆ ವಿಚಾರ ನಿಬಂಧನೆಗಳನ್ನು ಇಟ್ಟು ಅಂದು ಮುಂದುವರೆಸಿದ್ದರು. ವಾಪಸ್ ಪಡೆಯಲು ಸಿದ್ದರಾಮಯ್ಯನವರು ಪ್ರಯತ್ನಪಡಬೇಕು. ಇದು ವ್ಯಾಪಾರೀಕರಣ ಆಗಬಾರದು. ಕೃಷಿ ಭೂಮಿ ಕೃಷಿ ಭೂಮಿಯಾಗಿರಬೇಕು, ಮುಖ್ಯಮಂತ್ರಿಗಳು ಜರೂರ್ ಆಗಿ ಕಾಯ್ದೆಗಳನ್ನು ರದ್ದು ಮಾಡಿ ಆದೇಶ ಹೊರಡಿಸುತ್ತಾರೆಂದು ನಂಬಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಈ ಕಾಯ್ದೆಗಳನ್ನು ರದ್ದು ಪಡಿಸಲು ಪರಿಶೀಲನೆ ಮಾಡ್ತಿದ್ದೇವೆ ಎಂದು ಸಿಎಂ ಹೇಳಿದ್ದರು. ಆದರೆ ಪರಿಶೀಲನೆ ಎಂಬ ಪದ ಕೈಬಿಟ್ಟು ಮೋದಿಯವರು ಹೇಗೆ ಯಾರಿಗೆ ಹೇಳದೆ, ಕೇಳದೆ ಕಾಯ್ದೆಗಳನ್ನು ಜಾರಿಗೆ ತಂದರೋ ಹಾಗೇ ಈ ಕಾಯ್ದೆಗಳನ್ನು ರದ್ದುಪಡಿಸಿ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ