ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ್ ಅವರ ತಂಡ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದಿದೆ. ಆರೋಪಿಗಳ ಆರೋಗ್ಯವನ್ನು ಚಿಕ್ಕೋಡಿ ತಾಲೂಕಾ ಆಸ್ಪತ್ರೆಯಲ್ಲಿ ಪರೀಕ್ಷಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಲಾಗಿದೆ.
ಜುಲೈ 5 ರಂದು ಇಡೀ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಇದಕ್ಕಾಗಿ ಮಂಗಳವಾರ ಬೆಳಗ್ಗೆ ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ ತಂಡ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಇಬ್ಬರು ಆರೋಪಿಗಳಾದ ನಾರಾಯಣ ಮಾಳಿ ಹಾಗೂ ಹಸನ್ ಡಾಲಾಯತ್ ಅವರನ್ನು ವಶಕ್ಕೆ ಪಡೆದಿದೆ .ಪೊಲೀಸರು ಆರೋಪಿಯನ್ನು ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಪೊಲೀಸರು 14 ದಿನಗಳ ಪೊಲೀಸ್ ಕಸ್ಟಡಿಗೆ ಕೋರಲಿದ್ದಾರೆ. ಎರಡು ಸಿಪಿಐ, ಒಂದು ಡಿಆರ್ ತಂಡ ಭದ್ರತೆಯಲ್ಲಿ ಆರೋಪಿಗಳನ್ನು ಚಿಕ್ಕೋಡಿಗೆ ಕಳುಹಿಸಲಾಗಿದೆ. ಹಿಂಡಲಗಾ ಜೈಲಿನಿಂದ ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗುತ್ತೆ. ಬಳಿಕ ಪೊಲೀಸರು ಚಿಕ್ಕೋಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.