ಬೆಳಗಾವಿ: ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಿರಂತರ ಹತ್ಯೆಗಳು, ಗೂಂಡಾಗಿರಿ ರಾಜಕಾರಣ, ದರೋಡೆ ನಡೆಯುತ್ತಿತ್ತು. ಹಿಂದಿನ ಅವರ ಸರ್ಕಾರದ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗ ಇಂತಹ ಪ್ರಕರಣ ವೈಭವಿಕರೀಸುತ್ತವೆ ಮತ್ತು ರಾರಾಜಿಸುತ್ತವೆ. ಇಂತಹ ಕೊಲೆಗಡುಕರು, ದಂಗೆಕೋರರನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯ. ತನಿಖೆ ಪಾರದರ್ಶಕವಾಗಿ ನಡೆಯಬೇಕು. ಹತ್ಯೆಯ ಹಿಂದೆ ಯಾರ್‍ಯಾರ ಕೈವಾಡ ಇದೆ ಎಂದು ಬಯಲಾಗಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು. ಸತ್ಯಶೋಧನಾ ಸಮಿತಿ ಮಾಡಿಕೊಂಡು ಸ್ಥಳಕ್ಕೆ ಭೇಟಿ ಕೊಡುತ್ತಿದ್ದೇವೆ. ಕ್ಷೇತ್ರಕ್ಕೆ ಹೋಗಿ ಪರಿಶೀಲಿಸಿ, ಜನರ ಅಭಿಪ್ರಾಯ ಕೇಳಿ ತನಿಖಾ ವರದಿ ಪಡೆದುಕೊಳ್ಳುತ್ತೇವೆ. ಸರ್ಕಾರ ಏನು ಹೇಳುತ್ತೆ, ಪೊಲೀಸರು ಏನು ಹೇಳ್ತಾರೆ, ಅಲ್ಲಿಯ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡುತ್ತೇವೆ. ಇಲಾಖೆ ಹೇಳಿದೆ ಹಾಗೆ ಅವರೇ ಕೊಲೆ ಮಾಡಿದರೆ ಏನು ಸಮಸ್ಯೆ ಇಲ್ಲ. ಒಂದು ವೇಳೆ ಬೇರೆ ಏನಾದರೂ ಇದ್ದರೆ, ಜನರ ಭಾವನೆಗೆ ಧಕ್ಕೆ ಆಗಬಾರದು ಎಂದು ಹೇಳಿದರು.