Breaking News

ಜೈನಮುನಿಹತ್ಯೆ ಮಾಡಿದ ಆರೋಪಿಗಳಿಗೆ ವರ್ಷದೊಳಗೆ ಮರಣ ದಂಡನೆ ವಿಧಿಸಬೇಕು:ಅಬ್ದುಲ್ ಅಜೀಮ್

Spread the love

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ಆಗಬೇಕು. ಹತ್ಯೆ ಮಾಡಿದವರ ಜತೆಗೆ ಹತ್ಯೆಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಿಳಿಸಿದ್ದಾರೆ.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀ ಜೈನ ಮುನಿ ಹತ್ಯೆ ಪ್ರಕರಣದಲ್ಲಿ ಮೃತ ದೇಹವನ್ನು ವೈಜ್ಞಾನಿಕವಾಗಿ ಗುರುತಿಸುವ ನಿಟ್ಟಿನಲ್ಲಿ ಡಿಎನ್‌ಎ ಪರೀಕ್ಷೆ ಅಗತ್ಯವಿದೆ. ಸದ್ಯ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಹಿಸಿಕೊಂಡಿದ್ದಾರೆ. ಇದು ಅತ್ಯಂತ ಹ್ಯೇಯ ಮತ್ತು ಖಂಡನೀಯ ಪ್ರಕರಣ ಆಗಿರುವುದರಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಮೈಸೂರು ಹೀಲಿಯಂ ಸಿಲಿಂಡರ್​ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು

Spread the loveಮೈಸೂರು ಹೀಲಿಯಂ ಸಿಲಿಂಡರ್​ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು ಮೈಸೂರು: ಅರಮನೆಯ ಬಳಿ ಹೀಲಿಯಂ ತುಂಬಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ