Breaking News
Home / ರಾಜಕೀಯ / ಪಾಲಿಕೆ ‌ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್​ಗಳ ಪರಿಶೀಲನೆ

ಪಾಲಿಕೆ ‌ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್​ಗಳ ಪರಿಶೀಲನೆ

Spread the love

ಬೆಂಗಳೂರು : ನಗರದ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಈ ವೇಳೆ ಅವರು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೊದಲು ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿದ ಅವರು, ಇಂದಿರಾ ಕ್ಯಾಂಟೀನ್ ನಿರ್ವಹಣೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಬಳಿಕ ಇಂದಿರಾ ಕ್ಯಾಂಟೀನ್ ನಲ್ಲಿ ದುರಸ್ತಿಯಲ್ಲಿರುವ ಬಲ್ಬ್ ಸರಿಪಡಿಸಬೇಕು. ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು. ಇರುವ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ತೆರೆಯಲು ಕ್ಯಾಂಟೀನ್​ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಸೂಚಿಸಿದರು.

ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದ್ದು, ಅದನ್ನು ಬದಲಿಸಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತ ಗಿರಿನಾಥ್ ಇಂದಿರಾ ಕ್ಯಾಂಟೀನ್​ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದ್ದು, ನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇಂದಿರಾ ಕ್ಯಾಂಟೀನ್​ಗಳಿಗೆ ನಿಯೋಜಿಸಿರುವ ಮಾರ್ಷಲ್‌ಗಳನ್ನು ಬರೀ ಇಂದಿರಾ ಕ್ಯಾಂಟೀನ್ ನೋಡಿಕೊಳ್ಳುವುದು ಮಾತ್ರವಲ್ಲದೇ ಬೇರೆ-ಬೇರೆ ಜವಾಬ್ದಾರಿಗಳನ್ನು ಸಹ ನೀಡುಬೇಕೆಂದು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು. ಜೊತೆಗೆ ಇಂದಿರಾ ಕ್ಯಾಂಟೀನ್/ಆಹಾರದ ಗುಣಮಟ್ಟ/ಹೆಚ್ಚು ಹಣ ಪಡೆಯುವ ವಿಚಾರವಾಗಿ ದೂರುಗಳಿದ್ದಲ್ಲಿ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರುಗಳನ್ನು ನೀಡಬಹುದು ಎಂದು ಆಯುಕ್ತರು ಇದೇ ವೇಳೆ ತಿಳಿಸಿದರು.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ