Breaking News

4 ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್ ಪತ್ತೆ

Spread the love

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧಕ್ಕೆ ಕಳೆದ ವಾರ ಶಾಸಕ ಸೋಗಿನಲ್ಲಿ ವ್ಯಕ್ತಿಯೋರ್ವ ತೆರಳಿ ಸದನದೊಳಗೆ ಪ್ರವೇಶಿಸಿದ ಪ್ರಕರಣ ಬೆಳಕಿಗೆ ಬಂದ ನಂತರ ತಪಾಸಣೆ ಚುರುಕುಗೊಳಿಸಿದ್ದ ಪೊಲೀಸರು ಕಳೆದ ನಾಲ್ಕು ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್​ಗಳನ್ನು ಪತ್ತೆ ಹಚ್ಚಿದ್ದಾರೆ.

 

ಸಚಿವರ ಹಾಗೂ ಶಾಸಕರ ಪಾಸ್​ಗಳನ್ನು ಕಲರ್ ಝರಾಕ್ಸ್ ಮಾಡಿ ಭದ್ರತಾ ಸಿಬ್ಬಂದಿ ಹಾಗೂ ಮಾರ್ಷಲ್​ಗಳಿಗೆ ಯಾಮಾರಿಸುತ್ತಿದ್ದವರ ಖರ್ತನಾಕ್ ಪ್ಲಾನ್ ಬಹಿರಂಗಗೊಂಡಿದೆ. ಇದೀಗ ನಕಲಿ ಪಾಸ್ ಬಳಸಿ ವಿಧಾನಸೌಧಕ್ಕೆ ಒಳಪ್ರವೇಶಿಸುತ್ತಿದ್ದವರಿಗೆ ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ. ಜನಪ್ರತಿನಿಧಿಗಳಿಗೆ ವಿಧಾನಸೌಧ ಪ್ರವೇಶಕ್ಕೆ ಗುರುತಿನ ಚೀಟಿ ನೀಡಲಾಗುತ್ತದೆ. ಅದೇ ರೀತಿ ಸಚಿವ-ಶಾಸಕರ ಸಿಬ್ಬಂದಿಗೂ ಅಧಿಕೃತವಾಗಿ ಪಾಸ್ ನೀಡಲಾಗುತ್ತದೆ. ಅಲ್ಲದೆ, ಕಾರುಗಳಿಗೆ ಪ್ರತ್ಯೇಕವಾಗಿ ಪಾಸ್ ನೀಡಲಾಗುತ್ತದೆ. ಇದನ್ನೇ ದುರ್ಬಳಕೆ ಮಾಡಿಕೊಳ್ಳುವ ಕೆಲವರು ಕಾರುಗಳಿಗೆ ನೀಡಲಾಗುವ ಪಾಸ್​ಗಳಿಗೆ ಕಲರ್ ಝರಾಕ್ಸ್ ಮಾಡಿ ಒಳ ಪ್ರವೇಶಿಸಿರುವುದು ಕಂಡುಬಂದಿದೆ.

ಅಧಿಕೃತವಲ್ಲದ ಹಾಗೂ ನವೀಕರಣಗೊಳ್ಳದ ಪಾಸ್​ಗಳನ್ನು ತೋರಿಸಿ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಪ್ರವೇಶಿಸಿದ್ದ ಸುಮಾರು 300ಕ್ಕಿಂತ ಹೆಚ್ಚು ನಕಲಿ ಪಾಸ್​ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ ಅವಧಿ ಮುಗಿದಿರುವ, ಅಧಿಕೃತ ಪಾಸ್​ಗಳನ್ನು ಝರಾಕ್ಸ್ ಮಾಡಿಸಿಕೊಂಡಿರುವುದೇ ಅಧಿಕವಾಗಿದೆ. ರಾಜಕಾರಣಿಗಳ ಬೆಂಬಲಿಗರಿಂದಲೇ ಪಾಸ್​ಗಳ ದುರ್ಬಳಕೆ ಮಾಡಿಕೊಂಡಿರುವುದು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ನಕಲಿ ಪಾಸ್ ಬಳಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಭದ್ರತೆ ಉಸ್ತುವಾರಿ ವಹಿಸಿಕೊಂಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ