Breaking News

“ಚಂದ್ರಯಾನ 3 ರಾಷ್ಟ್ರದ ಭರವಸೆ, ಕನಸುಗಳನ್ನು ಹೊತ್ತೊಯ್ಯಲಿದೆ”:

Spread the love

ನವದೆಹಲಿ: ಕೋಟ್ಯಾಂತರ ಕಂಗಳು ಎದುರು ನೋಡುತ್ತಿರುವ ಚಂದ್ರಯಾನ 3 ಉಡಾವಣೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗ ಪ್ರಧಾನಿ ಮೋದಿ ಅವರು ಯೋಜನೆಯ ಹಿಂದಿರುವ ಎಲ್ಲಾ ಭಾರತದ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ.

ಎರಡು ದಿನಗಳ ಫ್ರಾನ್ಸ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿ, ”ಈ ಚಂದ್ರಯಾನ 3 ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯಲಿದೆ” ಎಂದು ಬಣ್ಣಿಸಿದ್ದಾರೆ.

‘ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ಜುಲೈ 14 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಡುತ್ತದೆ. ನಮ್ಮ ಚಂದ್ರಯಾನ-3 ತನ್ನ ಪ್ರಯಾಣವನ್ನು ಪ್ರಾರಂಭಿಲಿದೆ. ಕಕ್ಷೆ ಏರಿಸುವ ತಾಂತ್ರಿಕ ಕೆಲಸಗಳ ನಂತರ ಚಂದ್ರಯಾನ-3 ಅನ್ನು ಚಂದ್ರನ ವರ್ಗಾವಣೆ ಪಥಕ್ಕೆ ಸೇರಿಸಲಾಗುವುದು’ ಎಂದು ಹೇಳಿದ್ದಾರೆ.

‘ಇಂದು ಮಧ್ಯಾಹ್ನ 2.35ಕ್ಕೆ ಉಡಾವಣೆಯಾಗಲಿರುವ ಚಂದ್ರಯಾನ 3 300,000 ಕಿ.ಮೀ.ಗೂ ಹೆಚ್ಚು ದೂರವನ್ನು ಬಾಹ್ಯಾಕಾಶದಲ್ಲಿ ಕ್ರಮಿಸಲಿರುವ ಕಾರಣ ಕೆಲವು ವಾರಗಳ ನಂತ ಚಂದ್ರನನ್ನು ತಲುಪಲಿದೆ. ಆನ್‌ಬೋರ್ಡ್‌ನಲ್ಲಿರುವ ವೈಜ್ಞಾನಿಕ ಉಪಕರಣಗಳು ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲಿವೆ. ಈ ಅಧ್ಯಯನ ನಮ್ಮ ಚಂದ್ರನ ಬಗೆಗಿನ ಜ್ಞಾನವನ್ನು ಹೆಚ್ಚಿಸಲಿದೆ’ ಎಂದು ಅವರು ಹೇಳಿದರು.

 

 

‘ಭಾರತದ ದೇಶದ ಕನಸನ್ನು, ತಮ್ಮ ಕನಸಂತೆ ಭಾವಿಸಿ, ಚಂದ್ರಯಾನ 3 ರ ಉಡಾವಣೆಗೆ ಕೆಲಸ ಮಾಡಿರುವ ನಮ್ಮ ವಿಜ್ಞಾನಿಗಳಿಗೆ ಧನ್ಯವಾದಗಳು. ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯಂತ ಶ್ರೀಮಂತ ಇತಿಹಾಸವನ್ನು ಹೊಂದಿದೆ. ಚಂದ್ರಯಾನ-1 ಅನ್ನು ಜಾಗತಿಕ ಚಂದ್ರನ ಕಾರ್ಯಾಚರಣೆಗಳಲ್ಲಿ ಪಾಥ್ ಬ್ರೇಕರ್ ಎಂದು ಪರಿಗಣಿಸಲಾಗಿದೆ. ಏಕೆಂದರೆ ಚಂದ್ರಯಾನ 1 ಚಂದ್ರನ ಮೇಲೆ ನೀರಿನ ಅಣುಗಳ ಉಪಸ್ಥಿತಿಯನ್ನು ದೃಢಪಡಿಸಿತ್ತು. ಈ ಮಾಹಿತಿ ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ವೈಜ್ಞಾನಿಕ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿತ್ತು’ ಎಂದು ಮೋದಿ ಹೇಳಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ