ಬೆಳಗಾವಿ ಸಮೀಪದ ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗುರುವಾರ ರಾತ್ರಿ ಇಂಜಿನಿಯರಿಂಗ್ ಕಾಲೇಜು ಹಿಂಭಾಗದ ಆವರಣದಲ್ಲಿ ಕುಡಿದ ಮತ್ತಿನಲ್ಲಿ ಕೆಲ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ಜಗಳದಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಪಿರನವಾಡಿ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ (25) ಕೊಲೆಯಾದವರು. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಂಜಾ ಅಥವಾ ಮದ್ಯದ ಅಮಲಿನಿಂದ ಗೊಂದಲ ಉಂಟಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.