Breaking News

ಲಂಚ ಪಡೆಯುತ್ತಿದ್ದ ಫುಡ್​ ಇನ್ಸ್​ಪೆಕ್ಟರ್​ನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು

Spread the love

ಬೆಂಗಳೂರು : ಆಹಾರೋತ್ಪನ್ನಗಳ ವ್ಯಾಪಾರ ಪರವಾನಗಿ ಪರಿಶೀಲನೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆಹಾರ ನಿರೀಕ್ಷಕ (ಫುಡ್ ಇನ್ಸ್‌ಪೆಕ್ಟರ್)ನನ್ನು ವಶಕ್ಕೆ ಬಂಧಿಸಿದ್ದಾರೆ.

ಒಂದು ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆಯಿಟ್ಟು 43 ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದಾಗ ಫುಡ್ ಇನ್ಸ್‌ಪೆಕ್ಟರ್ ಮಹಾಂತೇಗೌಡ ಬಿ ಕಡಬಾಳುನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಆಹಾರೋತ್ಪನ್ನಗಳ ಮಾರಾಟ ಪರವಾನಗಿ ನೀಡಲು ರಂಗಧಾಮಯ್ಯ ಎಂಬುವರಿಂದ ₹ 1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಾಂತೇಗೌಡ, ಮುಂಗಡವಾಗಿ 10 ಸಾವಿರ ಪಡೆದುಕೊಂಡಿದ್ದ. ಈ ಬಗ್ಗೆ ರಂಗಧಾಮಯ್ಯ ಲೋಕಾಯುಕ್ತದ ಮೊರೆ ಹೋಗಿದ್ದರು. ತಡರಾತ್ರಿ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀಕಾಂತ್ ನೇತೃತ್ವದ ತಂಡ 43 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಮಹಾಂತೇಗೌಡನನ್ನು ವಶಕ್ಕೆ ಪಡೆಯಲು ಮುಂದಾಗಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸರ ತಂಡವನ್ನು ಕಂಡ ಮಹಾಂತೇಗೌಡ ಅಧಿಕಾರಿಗಳ ಮೇಲೆ ಕಾರು ನುಗ್ಗಿಸಲು ಯತ್ನಿಸಿದ್ದಾನೆ.

ಸುಮಾರು 15 ಕಿ.ಮೀ ದೂರ ಬೆನ್ನಟ್ಟಿದ ಲೋಕಾಯುಕ್ತ ಪೊಲೀಸರು ನೆಲಮಂಗಲದ ಸೊಂಡೆಕೊಪ್ಪ ಬಳಿ ಆರೋಪಿಯನ್ನು ತಡೆದು ಹಣದ ಸಮೇತ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿರುದ್ಧ ವಿಚಾರಣೆ ಮುಂದುವರೆದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ