Breaking News

ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್

Spread the love

ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್​ ಈಶ್ವರಪ್ಪರಿಗೆ ಕ್ಲೀನ್​ ಚಿಟ್​ ನೀಡಿದೆ.

ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸವನ್ನು ಹೆಚ್ಚು ಮಾಡಲು ಇವತ್ತಿನ ನ್ಯಾಯಾಲಯದ ತೀರ್ಪು ಸ್ಪೂರ್ತಿ ಆಗಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪನವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್​ ಚಿಟ್ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ನಂಬಿದ ಮನೆ ದೇವ್ರು ಚೌಡೇಶ್ವರಿ ನ್ಯಾಯ ಕೊಟ್ಟಿದ್ದಾಳೆ. ದೈವಭಕ್ತನಾದ ನನಗೆ ಮತ್ತಷ್ಟು ದೇವರ ಮೇಲೆ ನಂಬಿಕೆ ಹೆಚ್ಚಾಗಿದೆ ಎಂದರು.

ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈಶ್ವರಪ್ಪ ನಿರ್ದೋಷಿ ಎಂದು ತೀರ್ಪು ಬರುತ್ತಿದಂತೆ ಶಾಸಕ ಚನ್ನಬಸಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ