Breaking News

ಜೈನ ಮುನಿ ಮಹಾರಾಜರ ಕನಸುಗಳನ್ನು ಪೂರ್ಣ ಮಾಡುತ್ತೇವೆ: ಸಂಸದ ಅಣ್ಣಾಸಾಹೇಬ್ ಜೊಲ್ಲೆ

Spread the love

ಚಿಕ್ಕೋಡಿ (ಬೆಳಗಾವಿ) : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ.

ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದರು. ಮುಂದೆ ಅವರು ಬಿಟ್ಟು ಹೋದ ಕನಸುಗಳನ್ನು ಪೂರ್ಣ ಮಾಡುತ್ತೇವೆ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಇಂದು ಜೈನಮುನಿ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಕುಮಾರ ನಂದಿ ಮಹಾರಾಜರು ಬಿಇ ಪದವೀಧರ ಆಗಿದ್ದು, 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. ಈ ಪರಿಸರದಲ್ಲಿ ಒಳ್ಳೆಯ ಶಿಕ್ಷಣ ಸಂಸ್ಥೆ, ಆಶ್ರಮ ಅಭಿವೃದ್ಧಿ ಮಾಡಿದ್ದಾರೆ. ಈ ಚಿಕ್ಕ ಗ್ರಾಮದಲ್ಲಿ ಶಿಕ್ಷಣ ಕ್ರಾಂತಿ ಮಾಡುವುದಕ್ಕೆ ಶ್ರೀಗಳು ಕನಸು ಕಂಡಿದ್ದರು. ಅವರ ಕನಸನ್ನು ನಾವು ನನಸು ಮಾಡುತ್ತೇವೆ ಎಂದು ತಿಳಿಸಿದರು.

ಕರ್ನಾಟಕ ಪೊಲೀಸರು ಒಳ್ಳೆಯ ಕಾರ್ಯ ಮಾಡಿ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ಆಗಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಶ್ರೀಗಳ ಆಸೆಯಂತೆ ಶಿಕ್ಷಣ ಸಂಸ್ಥೆ ಕಟ್ಟಲು ವೈಯಕ್ತಿಕವಾಗಿ, ಪಕ್ಷದ ವತಿಯಿಂದಲೂ ಸಹಾಯ ಮಾಡುತ್ತೇವೆ. ಎಲ್ಲ ಮುನಿಗಳಿಗೂ ಸರ್ಕಾರದಿಂದ ರಕ್ಷಣೆ ಇರಬೇಕು. ಹಾಗು ಪ್ರಕರಣದ ಸತ್ಯಾಂಶ ಹೊರಬರಬೇಕು ಎಂದು ಸಿಬಿಐ ತನಿಖೆಗೆ ಆಗ್ರಹ ಮಾಡುತ್ತೇವೆ ಎಂದರು.

ಇದೆ ವೇಳೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಶ್ರೀಗಳ ಹತ್ಯೆಯಿಂದ ಮಾನವ ಸಮಾಜ ತಲೆತಗ್ಗಿಸುವಂತಾಗಿದೆ. ನಾವು ತೀವ್ರವಾಗಿ ಖಂಡಿಸುತ್ತೇವೆ. ಆದಷ್ಟು ಬೇಗನೆ ಆರೋಪಿತರಿಗೆ ಕಠಿಣ ಶಿಕ್ಷೆ ಆಗಬೇಕು. ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಲು ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ ಮಾಡಿತ್ತು. ನಾನು ಪಾರ್ಲಿಮೆಂಟರಿ ಕಮಿಟಿ ಬೋರ್ಡ್‌ನಲ್ಲಿ ಇದ್ದಿದ್ದರಿಂದ ಆಗ ಬರಲು ಆಗಿರಲಿಲ್ಲ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಗೆ ಪೂರ್ಣ ಸತ್ಯ ಗೊತ್ತಿದೆಯೋ ಅವರು ಪೊಲೀಸರಿಗೆ ತಿಳಿಸಿ ಎಂದು ಆಶ್ರಮದವರಿಗೂ ಮನವಿ ಮಾಡಿದ್ದೇನೆ. ಕರ್ನಾಟಕ ಪೊಲೀಸರು ದಕ್ಷ ಕಾರ್ಯ ಮಾಡಿ ಆರೋಪಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಿದ್ದಾರೆ. ಆ ಮ‌ನಸ್ಥಿತಿ ಹಿಂದಿನ ಷಡ್ಯಂತ್ರಕ್ಕೆ ಯಾವ ವ್ಯಕ್ತಿ ಇದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಯೋಗ್ಯ ತನಿಖೆ ಆಗಬೇಕು. ಆದರಿಂದ ಸಿಬಿಐ ತನಿಖೆಗೆ ವಹಿಸಬೇಕು ಎಂದು ಈರಣ್ಣ ಕಡಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ