Breaking News

ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.

Spread the love

ಗೋಕಾಕ: ಖಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.

ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್‍ ಹಾಗೂ 42 ಕೀ.ಮೀ. ಓಟವನ್ನು ​​​ 14 ಗಂಟೆ 30 ನಿಮಿಷದಲ್ಲಿ ಪೂರ್ತಿಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದ ಸಿಪಿಐ ಶ್ರೀಶೈಲ ಬ್ಯಾಕೋಡ ಅವರನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಸತ್ಕರಿಸಿದರು.

ಜುಲೈ 2 ರಂದು ಖಜಕಿಸ್ತಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆ ಆಯೋಜಿಸಲಾಗಿತ್ತು. 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್‍ ಹಾಗೂ 42 ಕೀ.ಮೀ. ಓಟವನ್ನು ​​​ 14 ಗಂಟೆ 30 ನಿಮಿಷದಲ್ಲಿ ಪೂರ್ಣಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್​​ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಸಾಧನೆ ಮಾಡಿದ್ದಾರೆ. ಸತತ ಪರಿಶ್ರಮದಿಂದ ಸಾಧನೆ ಮಾಡಿದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿ ಅವರು ಅಭಿನಂದನೆ ಸಲ್ಲಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ