Breaking News

ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ APP

Spread the love

ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್‌ ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

 

ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.

ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ ಹೆಲ್ಪ್ ಡೆಸ್ಕ್‌ನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ, ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು.

ಸಾರ್ವಜನಿಕರು ಇಂತಹ ನಕಲಿ ‌ಅಪ್ಲಿಕೇಷನ್‌ ಗಳ ಮೂಲಕ ತಮ್ಮ ವೈಯಕ್ತಿಕ ಆಧಾರ್, ಪ್ಯಾನ್ ಕಾರ್ಡ್ ಮಾಹಿತಿ ನೀಡಿ ಮೋಸ ಹೋಗಬಾರದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡ್ ಅಪ್ಲಿಕೇಷನ್‌ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಈ ಯೋಜನೆ ಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ