Breaking News

ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರ ಆತ್ಮಹತ್ಯೆ

Spread the love

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವಿಚಾರವಾಗಿ ಗಮನಹರಿಸುವುದು ಬಿಟ್ಟು ಕಾಂಗ್ರೆಸ್ ಮಹಾಘಟಬಂಧನ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇವತ್ತಿನ ಮಹಾಘಟಬಂಧನ್​ನ ವ್ಯವಸ್ಥಾಪಕರು ಜೆಡಿಎಸ್ ಸಂತತಿ ಮುಗಿದಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ ಪ್ರತಿಕಿಯಿಸಿದ ಹೆಚ್​ಡಿಕೆ, ನಮಗೇನೂ ಆಹ್ವಾನ ಬಂದಿಲ್ಲ, ನೋಡೋಣ ಇನ್ನೂ ಸಮಯವಿದೆ. ನನ್ನ ಗಮನವೇನಿದ್ದರೂ ನಾಡಿನ ಸಮಸ್ಯೆಗಳ ಬಗ್ಗೆ ಎಂದು ಹೇಳಿದರು.

ಏನೋ ಮಹಾಘಟಬಂಧನ್ ಅಂತ ಯಾರೂ ಸಾಧನೆ ಮಾಡದ್ದನ್ನು ನಾವು ಮಾಡಿದ್ದೇವೆಂದು ರಸ್ತೆಯುದ್ದಕ್ಕೂ ನೂರಾರು ಕೋಟಿ ರೂ. ಖರ್ಚು ಮಾಡಿ ಬ್ಯಾನರ್ ಹಾಕಿಕೊಂಡು ಕುಳಿತಿದ್ದಾರೆ. ಆದರೆ, ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇವರಿಗೆ ಬೇಕಿಲ್ಲ. ರೈತರು ಆತ್ಮಹತ್ಯೆ ಮಾಡಕೊಳ್ಳಬೇಡಿ ಎಂಬ ಒಂದು ಸಂದೇಶ ಕೊಟ್ಟರಾ?, ಇದೇ ರಾಜ್ಯದ ಪರಿಸ್ಥಿತಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ಪಕ್ಷಕ್ಕೆ ಕಾರ್ಯಕರ್ತರಿದ್ದಾರೆ. ನಾಡಿನ ಜನತೆ ಕೆಲವು ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರತಿ ಚುನಾವಣೆಗೆ ಕೆಲವೊಂದು ತೀರ್ಮಾನ ಆಗುತ್ತದೆ. ನಮ್ಮದು ಹೋರಾಟ ಮಾಡಿಕೊಂಡು ಬಂದಿರುವ ಪಕ್ಷ. ಈಗ ಏನೇ ಮಾತನಾಡಿದರೂ ನಗಣ್ಯ. ಲೋಕಸಭೆ ಚುನಾವಣೆಗೆ ಇನ್ನೂ ಎಂಟು, ಒಂಬತ್ತು ತಿಂಗಳಿದೆ ಎಂದು ಮಾರ್ಮಿಕವಾಗಿ ನುಡಿದರು.

 


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ