Breaking News

ದೂದ್ ಸಾಗರ್​ನಲ್ಲಿ ಅಡ್ಡಾದಿಡ್ಡಿ ಓಡಾಡಿದ್ರೆ ಎಚ್ಚರಿಕೆ : ರೈಲ್ವೆ ಇಲಾಖೆ

Spread the love

ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಪ್ರಸಿದ್ಧ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ.

ಅದರಲ್ಲಿಯೂ ಈಗ ಮಳೆ ಬರುತ್ತಿರುವುದರಿಂದ ಅದರ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಆದರೆ ಪ್ರವಾಸಕ್ಕೆಂದು ಬರುವ ಜನರು ಅಲ್ಲಿ ಮೋಜು ಮಸ್ತಿ ಮಾಡಿ ಪ್ರಕೃತಿಯನ್ನು ಹಾಳು ಮಾಡುವುದರಲ್ಲಿ ಹಿಂಜರಿಯುವುದಿಲ್ಲ. ಹೀಗಾಗಿ ಈ ಸಂಭ್ರಮಕ್ಕೆ ಕಡಿವಾಣ ಬೀಳಲಿದೆ. ಇನ್ಮುಂದೆ ಪ್ರವಾಸಿಗರು ದೂದ್ ಸಾಗರ್​ನಲ್ಲಿ ಅಡ್ಡಾದಿಡ್ಡಿ ಓಡಾಡುವಂತಿಲ್ಲ. ಈ ಬಗ್ಗೆ ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದೆ.

ನೈಋತ್ಯ ರೈಲ್ವೆಯು, ದೂದ್ ಸಾಗರ್‌ನ ಸೌಂದರ್ಯವನ್ನು ರೈಲಿನ ಬೋಗಿ ಒಳಗಿನಿಂದ ಮಾತ್ರವೇ ವೀಕ್ಷಿಸುವಂತೆ ಪ್ರಯಾಣಿಕರಿಗೆ ಸೂಚಿಸಿದೆ. ಗೋವಾ ಕರ್ನಾಟಕ ಗಡಿ ಭಾಗದಲ್ಲಿರುವ ದೂದ್ ಸಾಗರ್ ವೀಕ್ಷಿಸಲು ಪ್ರವಾಸಿಗರು ಬರುವುದು ಸಾಮಾನ್ಯ. ಇಲ್ಲಿ ರೈಲು ನಿಲುಗಡೆ ಇಲ್ಲದ ಕಾರಣ ಸಾಕಷ್ಟು ಪ್ರವಾಸಿಗರು ಹಳಿಗಳ ಮೇಲೆಯೇ ನಡೆದು ಬರುತ್ತಾರೆ. ಈ ಭಾಗದಲ್ಲಿ ಸಂಚರಿಸುವ ಗೂಡ್ಸ್ ರೈಲುಗಳನ್ನು ಹತ್ತಿ, ದೂಧ್‌ಸಾಗರ್ ಬಳಿ ಇಳಿಯವವರಿದ್ದಾರೆ. ಈ ರೀತಿಯ ದುಸ್ಸಾಹಸವನ್ನು ಮಾಡದಂತೆ ರೈಲ್ವೆ ಇಲಾಖೆ ಎಚ್ಚರಿಸಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ