Breaking News

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

Spread the love

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

 

ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಅರ್ಜಿಯಲ್ಲಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿರುವ ಅಂಶಗಳು: ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರಿಗೆ ಈ ಹುದ್ದೆಗಳನ್ನು ಸೃಜಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇವರಿಗೆ ನೀಡಲಾಗುವ ಸಂಬಳ, ಸಾರಿಗೆ, ವಸತಿ ಭತ್ಯೆ ಇತ್ಯಾದಿ ಖರ್ಚುಗಳು ರಾಜ್ಯದ ಬೊಕ್ಕಸದಿಂದ ವಿನಾ ಕಾರಣ ಭರಿಸುವಂತಾಗಿದೆ. ಇವೆಲ್ಲ ರಾಜಕೀಯ ನೇಮಕಾತಿ ಹಾಗೂ ಏಕಪಕ್ಷೀಯ ನಿರ್ಧಾರಗಳು. ಮುಖ್ಯಮಂತ್ರಿಗಳ ಕಚೇರಿ ಎಂಬುದು ಸಾರ್ವಜನಿಕ ಕಚೇರಿ. ಆದರೆ, ಇಲ್ಲೀಗ ಮುಖ್ಯಮಂತ್ರಿಗಳ ಬಂಧುಗಳು, ಅವರ ರಾಜಕೀಯ ಬೆಂಬಲಿಗರಿಗೆ ಆಸ್ಪದ ನೀಡಲಾಗಿದೆ. ಕಾನೂನಿನಲ್ಲಿ ಇಂತಹ ಹುದ್ದೆಗಳನ್ನು ರೂಪಿಸಲು ಅವಕಾಶವಿಲ್ಲ.

ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಉತ್ತಮ ಆಡಳಿತ ನೀಡುವ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ. ಅರ್ಜಿಯಲ್ಲಿನ ಪ್ರತಿವಾದಿಗಳಾಗಿರುವ ಖಾಸಗಿ ವ್ಯಕ್ತಿಗಳಿಗೆ ಸಾರ್ವಜನಿಕ ಕಚೇರಿಯಲ್ಲಿ ಮುಂದುವರೆಯಲು ಅವಕಾಶ ನೀಡಿದಲ್ಲಿ ದುರುಪಯೋಗವಾಗಲಿದೆ. ಹೀಗಾಗಿ ತಕ್ಷಣದಿಂದ ಅವರ ಕಾರ್ಯವನ್ನು ಸ್ಥಗಿತಗೊಳಿಸಲು ಮಧ್ಯಂತರ ಆದೇಶ ನೀಡಬೇಕು ಎಂದು ಕೋರಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ