Breaking News

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ

Spread the love

ದೇವನಹಳ್ಳಿ(ಬೆಂಗಳೂರು): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದಿದ್ದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು, ಸ್ಮಗ್ಲರ್ಸ್ ಮೊದಲೇ ಸೀಟ್ ಕೆಳಗಡೆ ಚಿನ್ನವನ್ನಿಟ್ಟು ಬಂಧಿತ ಆರೋಪಿಗೆ ತಿಳಿಸಿದ್ದರು. ಹೀಗಾಗಿ ಬಂಧಿತ ಆರೋಪಿ ಅದೇ ಸೀಟ್ ಬುಕ್ ಮಾಡಿಕೊಂಡು ಬೆಂಗಳೂರಿಗೆ ಬರುತ್ತಿದ್ದಂತೆ ಆತ ಸೀಟ್​ ಕೆಳಗೆ ಇಟ್ಟಿದ್ದ ಚಿನ್ನವನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ವಿಮಾನ ಇಳಿದು ಬಂದಿದ್ದಾನೆ. ಆದ್ರೆ, ಏರ್​ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನ ಪತ್ತೆಯಾಗಿದೆ.

ದೇಶಿಯ ಪ್ರಯಾಣಿಕರನ್ನು ಚೆಕ್ ಮಾಡಲ್ಲ, ಸುಲಭವಾಗಿ ಚಿನ್ನ ಸಾಗಿಸಬಹುದು ಎಂದು ಪ್ಲಾನ್ ಮಾಡಿದ್ದ. ಆದ್ರೆ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಅಧಿಕಾರಿಗಳ ಕೈಗೆ ತಗ್ಲಾಕಿಕೊಂಡಿದ್ದಾನೆ. ಇದೀಗ ಕಸ್ಟಮ್ಸ್ ಅಧಿಕಾರಿಗಳು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ವಿಮಾನದ ಸೀಟ್ ಕೆಳಗಡೆ ಚಿನ್ನವಿಟ್ಟವರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ