ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ವಿನೋದ್ ತೋಮರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮಂಜೂರಿಗೆ ಮನವಿ ಮಾಡಿದರು. ಈ ಸಾಮಾನ್ಯ ಜಾಮೀನು ವಿಚಾರಣೆಯನ್ನು ಜುಲೈ 20ರಂದು ನಡೆಯಲಿದೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ ಬ್ರಿಜ್ ಭೂಷಣ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಇದೇ ವೇಳೆ, ಭಾರತೀಯ ಕುಸ್ತಿ ಫೆಡರೇಶನ್ನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ಗೆ ಮಧ್ಯಂತರ ಜಾಮೀನು ನೀಡಲಾಗಿದೆ.
Laxmi News 24×7