Breaking News

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

Spread the love

ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿದ್ದ ವಿಮಾನವು ಮಂಗಳವಾರ ಸಂಜೆ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಆದರೆ, ವಿಮಾನದ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

 

 

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಭೋಪಾಲ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ ಮಾಹಿತಿ ನೀಡಿದ್ದಾರೆ. ಮುಂದಿನ ಪ್ರಯಾಣಕ್ಕಾಗಿ ವಿಮಾನವು ಟೇಕ್ ಆಫ್ ಆಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷ ಪಕ್ಷಗಳ ಎರಡು ದಿನಗಳ ಸಭೆಯಲ್ಲಿ ಸೋನಿಯಾ ಮತ್ತು ರಾಹುಲ್ ಭಾಗವಹಿಸಿದ್ದರು. ಇಂದು ಸಭೆ ಮುಗಿದ ಬಳಿಕ ಅವರು ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕಿ ಶೋಬಾ ಓಜಾ ಪ್ರತಿಕ್ರಿಯಿಸಿ, ವಿಮಾನದ ತುರ್ತು ಭೂಸ್ಪರ್ಶದ ಬಗ್ಗೆ ಮಾಹಿತಿ ಸಿಕ್ಕಿರುವುದರಿಂದ ನಾವು ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ