Breaking News

ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದ ಸಿಎಂ

Spread the love

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

 

 

 

ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ಪ್ರತಿ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆಯೇ ನಡೆದಿದೆ. ಇಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಬದಲಿಗೆ ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕಷ್ಟೇ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತೇ ಹೊರತು, ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ