Breaking News

6 ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ 13 ಕನ್ನಡ ಶಾಲೆಗಳಿಗೆ ಬೀಗ.

Spread the love

ಕಾರವಾರ (ಉತ್ತರ ಕನ್ನಡ) : ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೂ ಸರ್ಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ.

ಇದಕ್ಕೆ ಉದಾಹರಣೆ ಎಂಬಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗಿದ್ದು, ಕಳೆದ 6 ವರ್ಷಗಳಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಾಗಿಲು ಮುಚ್ಚಿವೆ.

ಹೌದು, ಕಾರವಾರ ಕರ್ನಾಟಕದ ಗಡಿ ಪ್ರದೇಶವಾಗಿದ್ದು, ಗೋವಾ ಗಡಿಯಲ್ಲಿ ಬರುವ ಕಾರವಾರ ತಾಲೂಕಿನಲ್ಲಿ ಕೊಂಕಣಿ, ಮರಾಠಿ ಭಾಷಿಗರು ಹೆಚ್ಚಿದ್ದರೂ ಸಹ ಕನ್ನಡ ಶಾಲೆಗಳಿಗೆ ಈ ಹಿಂದೆ ಸಾಕಷ್ಟು ಬೇಡಿಕೆ ಇತ್ತು. ಗಡಿಭಾಗದಲ್ಲಿ ಸರ್ಕಾರದ ಶಾಲೆಗಳು ಜೊತೆ ಹಲವು ಅನುಧಾನಿತ ಕನ್ನಡ ಶಾಲೆಗಳು ತಲೆ ಎತ್ತಿದ್ದವು. ಆದರೆ ಕಳೆದ ಕೆಲ ವರ್ಷದಿಂದ ಗಡಿ ಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತ ಬಂದಿದ್ದು ಹಲವು ಶಾಲೆಗಳು ಬಂದ್ ಆಗಿವೆ.

2017-18 ನೇ ಸಾಲಿನಲ್ಲಿ ಮೂರು ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದ್ದರೆ, 2019-20 ನೇ ಸಾಲಿನಲ್ಲಿ ಎರಡು, 20-21 ನೇ ಸಾಲಿನಲ್ಲಿ ಒಂದು ಶಾಲೆ, 2021-22 ನೇ ಸಾಲಿನಲ್ಲಿ ಎರಡು ಶಾಲೆಗಳು ವಿದ್ಯಾರ್ಥಿಗಳಿಲ್ಲದೇ ಬಂದ್ ಆಗಿತ್ತು. 2022-23ನೇ ಸಾಲಿನಲ್ಲೂ ಎರಡು ಶಾಲೆಗಳು ವಿದ್ಯಾರ್ಥಿಗಳಿಲ್ಲದೇ ಶಾಲೆ ಬಂದ್ ಮಾಡಿದ್ದಾರೆ. ಸದ್ಯ ಪ್ರಸ್ತುತ ವರ್ಷ ತಾಲೂಕಿನ ಮೂರು ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಂದ್ ಆಗಿದ್ದು, ಇನ್ನು ಒಂದು ಅನುದಾನಿತ ಪ್ರೌಢಶಾಲೆ ಸಹ ಬಂದ್ ಆಗುವ ಹಂತಕ್ಕೆ ತಲುಪಿದೆ. ಇದಲ್ಲದೇ ಸುಮಾರು 10 ಶಾಲೆಗಳಲ್ಲಿ ಕೇವಲ ಎರಡೇ ವಿದ್ಯಾರ್ಥಿಗಳು ದಾಖಲಾಗಿದ್ದು, ಗಡಿಭಾಗದಲ್ಲಿ ಕನ್ನಡ ಶಾಲೆಗಳು ಅವನತಿಯತ್ತ ಸಾಗುವಂತಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ