Breaking News

ಹಣದ ವಿಚಾರವಾಗಿ ಮಗನೇ ತಂದೆಯನ್ನು ಕೊಲೆ ಮಾಡಿ ಹೂತಿಟ್ಟ

Spread the love

ರಾಯಚೂರು: ಹಣದ ವಿಚಾರವಾಗಿ ಮಗನೇ ತಂದೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ಆತಂಕಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಶಿವನಪ್ಪ(65) ಮಗನಿಂದ ಕೊಲೆಯಾಗಿರುವ ತಂದೆ ಎಂದು ತಿಳಿದುಬಂದಿದೆ. 35 ವರ್ಷದ ಮಗ ಈರಣ್ಣ ಕೊಲೆ ಮಾಡಿರುವ ಆರೋಪಿ.

ಜುಲೈ 07ರಂದು ಕೊಲೆ ಮಾಡಿ, ವಡ್ಲೂರು ಕ್ರಾಸ್​ನ ಹತ್ತಿರ ಹೊಸದಾಗಿ ನಿರ್ಮಾಣ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟಿದ್ದಾನೆ. ಬಳಿಕ ತಾನೇ ಸ್ವತಃ ತಂದೆ ಕಾಣೆಯಾಗಿರುವ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಖುದ್ದಾಗಿ ಠಾಣೆಗೆ ಬಂದ ಆರೋಪಿ: ಇದಾದ ನಂತರ ಇಂದು ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಮೀಣ ಠಾಣೆಗೆ ಖುದ್ದಾಗಿ ಆರೋಪಿಯೇ ಬಂದಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪರಿಸ್ಥಿತಿ ‌ವಿಕೋಪಕ್ಕೆ ಹೋಗಿ ಕೊಲೆ: ಹಣಕ್ಕಾಗಿ ಆರೋಪಿ ಮಗ ಯಾವಾಗಲೂ ತಂದೆಯನ್ನ ಪೀಡಿಸುತ್ತಿದ್ದನಂತೆ. ಹಣ ನೀಡಿದ ವಿಚಾರಕ್ಕೆ ತಂದೆ ಹಾಗೂ ಮಗನ ನಡುವೆ ಜಗಳವಾಗಿ, ಪರಿಸ್ಥಿತಿ ‌ವಿಕೋಪಕ್ಕೆ ಹೋಗಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಯಚೂರು ಪೊಲೀಸ್ ಠಾಣೆ ಪಿಎಸ್‌ಐ, ಸಿಪಿಐ ಹಾಗೂ ಡಿವೈಎಸ್​ಪಿಯನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿದಾಗ ಕರೆಯನ್ನು ಸ್ವೀಕರಿಸಿಲ್ಲ.

ಮದ್ಯ ವ್ಯಸನಿ ಮಗನಿಗೆ ಬೆಂಕಿ ಹಚ್ಚಿ ಕೊಂದ ತಾಯಿ: ಇನ್ನೊಂದೆಡೆ ಮದ್ಯಪಾನ ಚಟಕ್ಕೆ ದಾಸನಾಗಿದ್ದ ಮಗನನ್ನ ತಾಯಿಯೊಬ್ಬಳು ಪೆಟ್ರೋಲ್ ಎರಚಿ ಸುಟ್ಟು ಹಾಕಿರುವ ಘಟನೆ (ಜುಲೈ 18-2023)ರ ಸೋಮವಾರ ಸಂಜೆ ಸೋಲದೇವನಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಚಾಂದ್ ಪಾಷಾ (40) ಕೊಲೆಯಾದ ವ್ಯಕ್ತಿ ಎಂಬುದು ತಿಳಿದುಬಂದಿತ್ತು. ಆತನ ತಾಯಿ‌ ಸೋಫಿಯಾಳನ್ನ ಪೊಲೀಸರು ವಶಕ್ಕೆ ಪಡೆದಿದ್ದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ