Breaking News

ಜೈನಮುನಿ ಹತ್ಯೆ ಪ್ರಕರಣ.. ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಬಿಜೆಪಿ, ಜೆಡಿಎಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ ಸಿಎಂ, ಜೈನಮುನಿ ಅವರು ಕಾಣೆಯಾಗಿರುವ ಬಗ್ಗೆ ಜುಲೈ 7 ರಂದು ದೂರು ಬಂದಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು.

ನಾರಾಯಣಪ್ಪ ಬಸಪ್ಪ ಮಾಳಗಿ ಅವರ ಜಮೀನಿನ ಕೊಳವೆ ಬಾವಿಯಲ್ಲಿ ಹಾಕಲಾಗಿದ್ದ ಶವದ ಅವಶೇಷಗಳನ್ನು 7 ಗಂಟೆಗಳ ಸತತ ಕಾರ್ಯಾಚರಣೆ ಮೂಲಕ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಹಣಕಾಸು ವಿಚಾರಕ್ಕಾಗಿ ಸ್ವಾಮೀಜಿ ಅವರನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾರೆ ಎಂದು ಸದನದಲ್ಲಿ ಹೇಳಿದರು. ಈ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸುವುದಾಗಿ ತಿಳಿಸಿದರು. ಈ ಹಿಂದೆ ಬಿಜೆಪಿ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಹಲವು ಬಾರಿ ಪ್ರತಿಭಟನೆ ನಡೆಸಿತ್ತು. ರಾಜ್ಯ ಸರ್ಕಾರ ಸಿಬಿಐ ತನಿಖೆ ಬೇಡಿಕೆಯನ್ನು ತಳ್ಳಿ ಹಾಕಿತ್ತು. ಅಂತಿಮವಾಗಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ