Breaking News

ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದು, ಜನ ನಮಗೆ ಅಧಿಕಾರ ನೀಡಿರುವ ಕಾರಣ ನಾವು ಇಲ್ಲಿ ಕುಳಿತ್ತಿದ್ದೇವೆ.

ಬಿಜೆಪಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ನಡೆ ಖಂಡಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ, ಕಳೆದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾವು ಹಾಗೂ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಮಾಡಿದ್ದೆವು. ಆಗಲೂ ನಾವು ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೆವು. ಆಗಲೂ ಡ್ಯಾನಿಶ್ ಅಲಿ ಸಮೇತ ಬಹುತೇಕ ಇದೇ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದರು. ಆಗ ನಾವು ಡ್ಯಾನಿಶ್ ಅಲಿಯನ್ನು ಪುಡಿಪುಕ್ಕ ಎಂದು ಕರೆಯಲು ಸಾಧ್ಯವೇ? ಈ ಬಾರಿ ಇವರೆಲ್ಲ ನಾಯಕರು ದೇಶವನ್ನು ಉಳಿಸಲು, ಭಾರತದ ಭವಿಷ್ಯ ಉಳಿಸಲು ಅವರದೇ ಆದ ಸಿದ್ಧಾಂತ ಇಟ್ಟುಕೊಂಡು ಆಗಮಿಸಿದ್ದಾರೆ. ರಾಜಕಾರಣದಲ್ಲಿ ಅವರಿಗೆ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅನಂತಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಇತ್ತು. ಆಗಲೂ ಶಿಷ್ಟಾಚಾರ ಪಾಲನೆ ಮಾಡಲಾಗಿತ್ತು. ಕುಮಾರಸ್ವಾಮಿ ಅವರು ಕೇಳಿದಾಗಲೂ ಶಿಷ್ಟಾಚಾರ ಪಾಲನೆ ಮಾಡಿದ್ದೇವೆ. ಬಿಜೆಪಿಯವರು ಕೇಳಿದಾಗಲೂ ನಾವು ಶಿಷ್ಟಾಚಾರ ಪಾಲಿಸಿದ್ದೇವೆ. ಆಗ ಶಿಷ್ಟಾಚಾರ ಪಾಲಿಸಿದ್ದ ಅಧಿಕಾರಿಗಳೇ ಈಗಲೂ ಇದ್ದಾರೆ. ಬೇಕಿದ್ದರೆ ಆಗ ಯಾರಿಗೆಲ್ಲಾ ಶಿಷ್ಟಾಚಾರ ಪಾಲನೆ ಮಾಡಿದ್ದೆವು ಎಂದು ಪಟ್ಟಿ ನೀಡಬಲ್ಲೆ. ಇದರಲ್ಲಿ ವಿಶೇಷವಿಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಗೊಂದಲವಿದೆ. ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕರಿಲ್ಲದೇ ಸದನ ನಡೆಯುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದಕ್ಕಿಂತ ದೊಡ್ಡ ಅಪಮಾನವಿಲ್ಲ. ಈ ವೈಫಲ್ಯವನ್ನು ಮುಚ್ಚಿಕೊಳ್ಳಲು ಬೆಳಗಿನಿಂದ ಸಂಜೆವರೆಗೂ ಇಲ್ಲಿ ಡ್ರಾಮಾ, ನೃತ್ಯ, ಮಾತುಗಳು ಎಲ್ಲವನ್ನು ಮಾಡುತ್ತಿದ್ದಾರೆ. ಬಿಜೆಪಿಯ ಈ ಪ್ರಯತ್ನಕ್ಕೆ ಇಲ್ಲಿ ಸೊಪ್ಪು ಹಾಕುವವರು ಯಾರೂ ಇಲ್ಲ. ನಾವು ಇದಕ್ಕೆ ಬಗ್ಗುವುದಿಲ್ಲ. ಅವರ ಪ್ರಶ್ನೆಗಳಿಗೆ ಉತ್ತರ ನೀಡಲು ನಾವು ಸಿದ್ಧವಿದ್ದೇವೆ.

ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕಾರ್ಯಕ್ರಮ: ಹೋರಾಟಕ್ಕೂ ರೆಡಿಯಾಗಿದ್ದೇವೆ. ಜನರ ಮುಂದೆ ಹೋಗಲು ಸಿದ್ಧ. ಜನ ನಿಮ್ಮನ್ನು ಎಲ್ಲಿ ಕೂರಿಸಬೇಕೋ ಅಲ್ಲಿ ಕೂರಿಸಿದ್ದಾರೆ. ನಮ್ಮ ಆಡಳಿತವನ್ನು ಸ್ವಲ್ಪ ತಾಳ್ಮೆಯಿಂದ ನೋಡಿ. ಪ್ರತಿನಿತ್ಯ ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಇಂದೂ ಕೂಡ, ದೇಶದಲ್ಲಿ ಅತಿದೊಡ್ಡ ಆರ್ಥಿಕ ಭದ್ರತಾ ಯೋಜನೆ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಮಾಡುತ್ತಿದ್ದೇವೆ. ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ