Breaking News

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Spread the love

ಬೆಂಗಳೂರು : ಕೊನೆಗೂ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟರು.

ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಯು ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24 ಸಾವಿರ ರೂ. ಗಳನ್ನು ಪಡೆಯಲಿದ್ದಾರೆ. 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರೆಯಲಿದೆ. ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ.‌ ಜಮೆಯಾಗಲಿದೆ.

‘₹30 ಸಾವಿರ ಕೋಟಿಯ ಯೋಜನೆ’: ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಇತಿಹಾಸದಲ್ಲಿ ಯಾರೂ ಕೂಡ ಈ ರೀತಿಯ ಯೋಜನೆಗಳನ್ನು ಜಾರಿ ಮಾಡಿಲ್ಲ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ 5 ಗ್ಯಾರಂಟಿಗಳು ಜಾರಿ ಆಗುತ್ತವೆ. ಗೃಹ ಲಕ್ಷ್ಮಿಗೆ 35 ಸಾವಿರ ಕೋಟಿ ರೂಪಾಯಿ ಕೊಡುತ್ತಿದ್ದೇವೆ. ಇಡೀ ದೇಶದಲ್ಲೇ 30 ಸಾವಿರ ಕೋಟಿಯ ಒಂದು ಯೋಜನೆ ಜಾರಿಗೆ ತಂದ ಏಕೈಕ ರಾಜ್ಯ ಕರ್ನಾಟಕ. ಜನಪರ ಯೋಜನೆಯನ್ನು ಸಹಿಸಲಾರದೆ ಅತ್ತೆ-ಸೊಸೆ, ಅತ್ತಿಗೆ-ನಾದಿನಿ ಜಗಳ ಹುಟ್ಟು ಹಾಕುತ್ತಾ ಬಿಜೆಪಿಯವರು ಕಿರಿಕ್ ಮಾಡ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

 

 


Spread the love

About Laxminews 24x7

Check Also

ಇದೇ ೧೧ ರಂದು ಬೆಳಗಾವಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ

Spread the love ಬೆಳಗಾವಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ “ಸಾಂಸ್ಕೃತಿಕ ನಾಯಕ”ನೆಂದು ಘೋಷಿಸಿದ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ