Breaking News

ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆ

Spread the love

ಬೆಂಗಳೂರು : ನಗರದ ಜನನಿಬಿಡ ಪ್ರದೇಶಗಳಲ್ಲಿ ಶಂಕಿತ ಭಯೋತ್ಪಾದಕರು ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ.

ಹೀಗಾಗಿ, ಇಲ್ಲಿನ ಸ್ಥಳೀಯರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.

ಪ್ರಕರಣದ ಐದನೇ ಆರೋಪಿ ಜಾಯೇದ್ ತಬ್ರೆಸ್​ನ ಕೊಡಿಗೆಹಳ್ಳಿಯ ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್​ಗಳನ್ನ ಸಿಸಿಬಿ ವಶಪಡಿಸಿಕೊಂಡಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ತಿಳಿದುಬಂದಿದೆ. 2021 ರಲ್ಲಿ ಉಪ್ಪಿನಂಗಡಿ ಬಳಿ ಐದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದವು. ನೆಲದಡಿ ದೊರೆತಿದ್ದ 40 ವರ್ಷದಷ್ಟು ಹಳೆಯ ಗ್ರೆನೇಡ್​ಗಳು ಇವಾಗಿದ್ದವು. ನಂತರ 2022ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್​ ಪತ್ತೆಯಾಗಿತ್ತು. ವಿದ್ಯಾರ್ಥಿಗಳು ಚೆಂಡು ಎಂದು ಆಟವಾಡುವಾಗ ನಿರ್ಜೀವ ಸ್ಥಿತಿಯಲ್ಲಿ ಗ್ರೆನೇಡ್ ಇದಾಗಿದ್ದವು. ಇದಾದ ಬಳಿಕ ರಾಜಧಾನಿಯಲ್ಲೇ ಭಾರಿ ಪ್ರಮಾಣದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

 ಶಂಕಿತ ಉಗ್ರನ ಮನೆಯಲ್ಲಿ ಪತ್ತೆಯಾದ 4 ಹ್ಯಾಂಡ್ ಗ್ರೆನೇಡ್ಹ್ಯಾಂಡ್ ಗ್ರೆನೇಡ್ ಎಂದರೇನು?: ಡೆಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕ ಇದಾಗಿದೆ. ಸೇಫ್ಟಿ ಪಿನ್​ ಅಥವಾ ಕಾಟರ್ ಪಿನ್​ನಿಂದ ನಿಯಂತ್ರಿಸಲ್ಪಡುತ್ತೆ. ಹ್ಯಾಂಡ್ ಗ್ರೆನೇಡ್​ಗಳಲ್ಲಿ ಹಲವು ವಿಧಗಳಿವೆ. ರಾಸಾಯನಿಕ ಗ್ರೆನೇಡ್ ಗಳು, ಸ್ಟನ್​ ಗನ್ ಗ್ರೆನೇಡ್​ಗಳು, ಭಾರಿ ಸ್ಪೋಟಕದ ಗ್ರೆನೇಡ್​ಗಳಿವೆ. ಆದರೆ ವಿದೇಶಿ ಗ್ರೆನೇಡ್​ಗಳಾದ Dam51, mk3a2 ಗ್ರೆನೇಡ್​ಗಳು ಭಾರಿ ಪ್ರಮಾಣದ ಸ್ಪೋಟವನ್ನ ಮಾಡುತ್ತವೆ. 40 ಮೀಟರ್​ನಿಂದ 200 ಮೀಟರ್​ವರೆಗೂ ಈ ಗ್ರೆನೇಡ್​ಗಳು ಪರಿಣಾಮ ಬೀರಲಿವೆ. ಹೀಗಾಗಿ ಈಗ ಸಿಕ್ಕಿರುವ ಗ್ರೆನೇಡ್​ಗಳು ಯಾವ ಮಾದರಿಯವು ಎಂಬುದರ ಬಗ್ಗೆ ಸಿಸಿಬಿ ತನಿಖಾ ತಂಡ ತನಿಖೆ ಮುಂದುವರೆಸಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ