Breaking News

ವರುಣನ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದರೆ, ಮತ್ತೊಂದಿಷ್ಟು ಮನೆಗಳು ಧರೆಗುರುಳಿವೆ.

Spread the love

ಬೆಳಗಾವಿ: ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ವರುಣನ ಆರ್ಭಟಕ್ಕೆ ಕೆಲ ಮನೆಗಳಿಗೆ ನೀರು ನುಗ್ಗಿದರೆ, ಮತ್ತೊಂದಿಷ್ಟು ಮನೆಗಳು ಧರೆಗುರುಳಿವೆ.

ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ.

ಕಳೆದ ಹತ್ತು ದಿನಗಳಿಂದ ಬೆಳಗಾವಿ ನಗರ ಮತ್ತು ಜಿಲ್ಲಾದ್ಯಂತ ಬಿಟ್ಟು ಬಿಡದೇ ಮಳೆಯಾಗುತ್ತಿದೆ. ಅಲ್ಲದೇ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಜಿಲ್ಲೆಯ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಹದಾಯಿ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿ ಪಾತ್ರ ಹಾಗೂ ತಗ್ಗು ಪ್ರದೇಶದ ಮನೆಗಳಿಗೆ ನೀರು‌ ನುಗ್ಗಿದ್ದರಿಂದ ಜನರು ತೀವ್ರ ಪರದಾಡುವಂತಾಗಿದೆ.

ನಿರಂತರ ಮಳೆಯಿಂದ ಖಾನಾಪುರ ತಾಲೂಕಿನ ಭೂರುಣಕಿ ಗ್ರಾಮದ ಗೋಪಾಲ ತಾರೋಡ್ಕರ ಮತ್ತು ಗೌಸ್ ಅಹ್ಮದ್ ಹೆರೇಕರ ಎಂಬುವವರಿಗೆ ಸೇರಿದ ಮನೆಗಳು ಧರೆಗೆ ಉರುಳಿವೆ. ತಾರೋಡ್ಕರ್ ಕುಟುಂಬ ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ್ದ ಸಮಯದಲೇ ಮನೆ ಬಿದ್ದಿದೆ. ಗೋಪಾಲ್ ಅವರ ಪತ್ನಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿದ್ದಿರುವ ಮನೆ ಗೋಡೆಗೆ ತಾಡಪತ್ರಿ‌ ಕಟ್ಟಿಕೊಂಡು ಅಲ್ಲಿಯೇ ಈ ಕುಟುಂಬ ಆಶ್ರಯ ಪಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ