Home / ರಾಜಕೀಯ / ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ

Spread the love

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿದೆ.

ಅದರಲ್ಲೂ ಅಘನಾಶಿನಿ ನದಿ ನೆರೆಗೆ ಹಲವು ಗ್ರಾಮಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ತವಾಗಿದೆ.

ಅಘನಾಶಿನಿ, ಗಂಗಾವಳಿ, ಶರಾವತಿ, ವರದಾ ಹಾಗು ಕಾಳಿ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಘಟ್ಟದ ಮೇಲ್ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಗಂಗಾವಳಿ ಹಾಗೂ ಅಘನಾಶಿನಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ತೀರದ ಪ್ರದೇಶಗಳು ಬಹುತೇಕ ಮಳೆ ನೀರಿನಿಂದ ಆವೃತವಾಗಿದ್ದು, ಜನ-ಜಾನುವಾರುಗಳ ಸ್ಥಳಾಂತರ ಕಾರ್ಯ ನಡೆಯುತ್ತಿದೆ.

ಶಿರಸಿಯ ಶಂಕರಹೊಂಡದಿಂದ ಹುಟ್ಟಿ ಸುಮಾರು 117 ಕಿ.ಮೀ. ಹರಿದು ಕುಮಟಾದಲ್ಲಿ ಅರಬ್ಬಿ ಸಮುದ್ರ ಸೇರುವ ಅಘನಾಶಿನಿ ಈ ವರ್ಷ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೇಂದ್ರ ಜಲ ಆಯೋಗ ಸೋಮವಾರ ಬೆಳಿಗ್ಗೆ ನೀಡಿರುವ ಮಾಹಿತಿಯ ಪ್ರಕಾರ, 17 ಮೀ. ಗರಿಷ್ಟ ಮಟ್ಟ ಎಂದು ನಿಗದಿಪಡಿಸಿದ್ದು, ನೀರಿನ ಮಟ್ಟ 17.60 ಮೀ.ಗೆ ಏರಿಕೆಯಾಗಿದೆ. ಸದ್ಯ ಜಿಲ್ಲಾಡಳಿತ ಅಘನಾಶಿನಿಯಿಂದ ಪ್ರವಾಹಬಾಧಿತ ಪ್ರದೇಶಗಳ ಜನರಿಗಾಗಿ ಕಾಳಜಿ‌ ಕೇಂದ್ರಗಳನ್ನು ತೆರೆಯುತ್ತಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ.

ಇಂದೂ ಶಾಲಾ-ಕಾಲೇಜುಗಳಿಗೆ ರಜೆ : ಭಾನುವಾರ ರಾತ್ರಿ ಶಿರಸಿ-ಕುಮಟಾ ರಸ್ತೆಯ ರಾಗಿಹೊಸಳ್ಳಿ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ತೊಡಕಾಯಿತು. ಈ ಮಾರ್ಗದಲ್ಲಿ ಭಾರಿ ವಾಹನಗಳ ಓಡಾಟ ಕಷ್ಟವಿದ್ದು, ಲಘು ವಾಹನಗಳಿಗೆ ಸಂಚರಿಸಲು ಪೊಲೀಸರು ಅವಕಾಶ ಮಾಡಿಕೊಡುತ್ತಿದ್ದಾರೆ. ಶಿರಸಿ ಮತ್ತು ಕುಮಟಾದಿಂದ ಸಾಗುವವರಿಗೆ ಬದಲಿ ಮಾರ್ಗಗಳನ್ನು ಬಳಸುವಂತೆಯೂ ಸೂಚಿಸಲಾಗಿದೆ. ಹವಾಮಾನ ಇಲಾಖೆ ಇನ್ನೂ 5 ದಿನಗಳವರೆಗೆ ಭಾರಿ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿದ್ದು, ಶಾಲಾ- ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ