Breaking News

ಬಾಯಿಗೆ ಹಲ್ಲಿ ನುಗ್ಗಿ ಮಗು ಸಾವು,

Spread the love

ಕೊರ್ಬಾ (ಛತ್ತೀಸ್​ಗಢ) : ಹಲ್ಲಿಯೊಂದು ಬಾಯಿಯೊಳಗೆ ನುಗ್ಗಿದ ಪರಿಣಾಮ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಛತ್ತೀಸ್​ಗಢದ ಕೊರ್ಬಾದಲ್ಲಿ ನಡೆದಿದೆ.

ಆದರೆ, ಹಲ್ಲಿಗೆ ಮನುಷ್ಯನನ್ನು ಸಾಯಿಸುವಷ್ಟು ವಿಷ ಇರುವುದಿಲ್ಲ. ಇದಕ್ಕೆ ಬೇರೆಯದೇ ಕಾರಣ ಇರಬೇಕು ಎಂಬುದು ವೈದ್ಯರ ಅನುಮಾನ. ಹಲ್ಲಿ ಕೂಡ ಮಗುವಿನ ಬಾಯಿಯಲ್ಲೇ ಸಾವನ್ನಪ್ಪಿದ್ದು, ಅಚ್ಚರಿ ಉಂಟು ಮಾಡಿದೆ.

ಕೊರ್ಬಾ ಜಿಲ್ಲೆಯ ಸುಮೇಧಾ ನಾಗಿನ್‌ಭಂಥ ಗ್ರಾಮದಲ್ಲಿ ಈ ಅಚ್ಚರಿ ಘಟಿಸಿದೆ. ಮಲಗಿದ್ದ ವೇಳೆ ಮಗುವಿನ ಬಾಯಿಯಲ್ಲಿ ಹಲ್ಲಿ ಇರುವುದನ್ನು ತಾಯಿ ಕಂಡಿದ್ದಾಳೆ. ಕಿರುಚಿದ ಆಕೆ ತಕ್ಷಣವೇ ಅದನ್ನು ಹೊರಗೆಳೆದು ಬಿಸಾಡಿದ್ದಾಳೆ. ಮಗುವನ್ನು ಎಬ್ಬಿಸಲು ಯತ್ನಿಸಿದಾಗ ಅದು ನಿಸ್ತೇಜವಾಗಿತ್ತು. ಅಕ್ಕಪಕ್ಕದವರು ಬಂದು ಕಂಡಾಗ ಮಗು ಸಾವನ್ನಪ್ಪಿದ್ದು ಗೊತ್ತಾಗಿದೆ.

ಕೋಣೆಯಲ್ಲಿ ಮಗುವೊಂದನ್ನೇ ಮಲಗಿಸಲಾಗಿತ್ತು. ತಾಯಿ ಬಂದು ನೋಡಿದಾಗಲೇ ಘಟನೆ ನಡೆದಿದ್ದು ಗೊತ್ತಾಗಿದೆ. ಹಲ್ಲಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ್ದರು. ಮಗುವಿನ ಬಾಯಿಗೆ ಹಲ್ಲಿ ಹೇಗೆ ನುಗ್ಗಿತು ಎಂಬುದು ಯಾರಿಗೂ ತಿಳಿಯದ ಪ್ರಶ್ನೆಯಾಗಿ ಉಳಿದಿದೆ. ಹಲ್ಲಿಯ ವಿಷ ಸೇವಿಸಿ ಮಗು ಸಾವನ್ನಪ್ಪಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದು ಜನರಲ್ಲಿನ ಅನುಮಾನವಾಗಿದೆ. ಪೋಷಕರ ಇಲ್ಲದಾಗ ಮಗುವಿಗೆ ಏನಾಯಿತು ಮತ್ತು ಹಲ್ಲಿ ಆತನ ಬಾಯಿಗೆ ಹೇಗೆ ಪ್ರವೇಶಿಸಿತು ಎಂಬ ಪ್ರಶ್ನೆ ಮೂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮಗುವಿನ ಬಾಯಿಯೊಳಗೆ ಹಲ್ಲಿ ನುಗ್ಗಿ ಕಚ್ಚಿದ್ದರಿಂದ ಮಗು ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಊಹಿಸಲಾಗಿದೆ. ಮಗುವಿನ ಮೃತದೇಹವನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ