Home / ರಾಜಕೀಯ / ಜೆಡಿಎಸ್​ – ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ H.D.D.

ಜೆಡಿಎಸ್​ – ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ H.D.D.

Spread the love

ಬೆಂಗಳೂರು: ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯದಲ್ಲಿ ಎದ್ದಿದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​ ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿಂದು ಪಕ್ಷದ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಶಾಸಕ ಜಿ ಟಿ ದೇವೇಗೌಡ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 28 ಕ್ಷೇತ್ರಗಳಲ್ಲಿ ಎಲ್ಲೆಲ್ಲಿ ಗೆಲ್ಲುವ ಸಾಮರ್ಥ್ಯ ಇದೆಯೋ ಅಲ್ಲಿ ನಿಲ್ಲುತ್ತೇವೆ. ಅಧಿಕೃತ ವಿರೋಧ ಪಕ್ಷ ಬಿಜೆಪಿ, ಅನಧಿಕೃತ ವಿರೋಧ ಪಕ್ಷ ಜೆಡಿಎಸ್. ಕೆಲವೊಂದು ವಿಚಾರಕ್ಕೆ ಎರಡು ಪಕ್ಷದವರು ಸದನದಿಂದ ವಾಕ್ ಔಟ್ ಮಾಡಿದ್ದಾರೆ. ಈ ಹಿಂದೆಯೂ ಈ ರೀತಿ ಆಗಿದೆ ಎಂದರು.

ನೈಸ್​ ವಿಚಾರವಾಗಿ ಮಾತನಾಡಿದ ದೇವೇಗೌಡರು, ಬೊಮ್ಮಾಯಿ ಸಿಎಂ‌ ಆಗಿದ್ದಾಗ ಸದನ ಸಮಿತಿ ರಚನೆ ಮಾಡಿದ್ರು. ಸದನ ಸಮಿತಿ ವರದಿಯಲ್ಲಿ 11,668 ಎಕರೆ ವಾಪಸ್ ಕೊಡಲು ವರದಿ ನೀಡಿದೆ. ಯಾರ ಭೂಮಿ ಇದು.? ಭೂಮಿ ವಾಪಸ್ ಪಡೆಯಲು ಸಿದ್ದರಾಮಯ್ಯಗೆ ಏನು ಕಷ್ಟ ಇದೆ.? ನೈತಿಕತೆ ಬಗ್ಗೆ ಮಾತಾಡ್ತಾರೆ. ಇದರಲ್ಲಿ ಬರೋ ಹಣವನ್ನು ಐದು ಉಚಿತ ಕಾರ್ಯಕ್ರಮಕ್ಕೆ ಬಳಸಿಕೊಳ್ಳಿ. ಕೋಟ್ಯಂತರ ಹಣ ಇದರಲ್ಲಿ ಬರುತ್ತದೆ. ಒಂದು ಎಕರೆಗೆ ಐದು, ಹತ್ತು ಕೋಟಿ ರೂಪಾಯಿ ಬರುತ್ತದೆ. ಸಿದ್ದರಾಮಯ್ಯ ಅವರೇ ನೀವು ಮಾತಾಡುವ ಮಾತು ಹೃದಯದ ಅಂತರಾಳದಿಂದ ಬರಬೇಕು. ಅಧಿಕಾರ ಇರುತ್ತೆ, ಹೋಗುತ್ತೆ. ನೈತಿಕತೆ ಮುಖ್ಯ ಎಂದು ತಿಳಿಸಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ