Breaking News

ಮನೆಹಾನಿ ಹೆಚ್ಚಿನ ಪರಿಹಾರಕ್ಕೆ ಚಿಂತನೆ:? ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ:ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರು ಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆ ಜಾರಿಗೆ ತರುವ ಚಿಂತನೆಯಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು ಅನುಕೂಲವಾಗಲು ಐದರಿಂದ ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಕಿರುಸೇತುವೆ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಅದೇ ರೀತಿ ಖಾನಾಪುರ ತಾಲೂಕಿನಲ್ಲಿ ಸೇತುವೆ ನಿರ್ಮಾಣಕ್ಕೆ ವಿಶೇಷ ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮನೆಹಾನಿ ಹೆಚ್ಚಿನ ಪರಿಹಾರಕ್ಕೆ ಚಿಂತನೆ:ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ಮನೆಗಳಿಗೆ ಸದ್ಯಕ್ಕೆ ಮಾರ್ಗಸೂಚಿ ಪ್ರಕಾರ ಪರಿಹಾರವನ್ನು ನೀಡಲಾಗುತ್ತಿದೆ. ಸಂಪೂರ್ಣ ಕುಸಿದಿರುವ ಮನೆಗಳ ನಿರ್ಮಾಣಕ್ಕೆ ಐದು ಲಕ್ಷ ರೂ ಪರಿಹಾರವನ್ನು ನೀಡುವ ಬಗ್ಗೆ ಸರಕಾರದ ಮಟ್ಟದಲ್ಲಿ ನಿರ್ಧರಿಸಲಾಗುವುದು. ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ರಸ್ತೆಗಳು ತೀವ್ರ ಹದಗೆಟ್ಟಿರುವುದು ಗಮನಕ್ಕೆ ಬಂದಿರುತ್ತದೆ. ಸದ್ಯಕ್ಕೆ ತಾತ್ಕಾಲಿಕ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ನವೆಂಬರ್ ಬಳಿಕ ರಸ್ತೆ ನಿರ್ಮಾಣದ ಕುರಿತು ಪರಿಶೀಲಿಸಲಾಗುವುದು ಎಂದರು.

ಖಾನಾಪುರದಲ್ಲಿ 87 ಮನೆ ಭಾಗಶಃ ಕುಸಿತ: ಖಾನಾಪುರ ತಾಲೂಕಿನಲ್ಲಿ 87 ಮನೆಗಳು ಭಾಗಶಃ ಕುಸಿದಿವೆ. ನಾಲ್ಕು ಸಂಪೂರ್ಣವಾಗಿ ಕುಸಿದಿದ್ದು, ನಾಲ್ಕು ಮನೆಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಮಾಹಿತಿ ನೀಡಿದ ಸಚಿವರು, ಮಳೆಯ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹಾನಿಯ ಪ್ರಮಾಣ ಕೂಡ ಹೆಚ್ಚಾಗಬಹುದು. ಹಾಗಾಗಿ‌ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿರುತ್ತದೆ. ವೇದಗಂಗಾ – ದೂಧಗಂಗಾ ಸೇರಿದಂತೆ ಎಲ್ಲ ನದಿಗಳ ಒಳಹರಿವು ಪ್ರಮಾಣದ ಮೇಲೆ ನಿಗಾವಹಿಸಲಾಗಿದೆ. ಇನ್ನು ಆಲಮಟ್ಟಿ ಜಲಾಶಯ ಭರ್ತಿಯಾದ ಬಳಿಕ ಒಳ ಹರಿವು ಆಧರಿಸಿ ಅದೇ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.


Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ