Breaking News

ಮಳೆ ತಗ್ಗಿದರೂ ಮುಂದುವರಿದ ಪ್ರವಾಹ: ಹೆದ್ದಾರಿಗಳಲ್ಲಿ ಗುಡ್ಡ ಕುಸಿತ,

Spread the love

ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡದಲ್ಲಿ ಅಬ್ಬರಿಸುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ನದಿ ತೀರದ ಪ್ರದೇಶದಲ್ಲಿ ಸೃಷ್ಟಿಯಾಗಿದ್ದ ಪ್ರವಾಹ ಕೊಂಚ ಇಳಿಕೆಯಾಗಿದೆ. ಆದರೆ, ಪ್ರವಾಹ ಹಾಗೂ ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಗುಡ್ಡ ಕುಸಿತದಿಂದಾಗಿ ಹಲವು ಹೆದ್ದಾರಿಗಳು ಬಂದ್​ ಆಗಿವೆ. ಜನ ಸಂಚಾರಕ್ಕೆ ಪರದಾಡಬೇಕಾದ ಸ್ಥಿತಿ ಮುಂದುವರಿದಿದೆ.

ಉತ್ತರ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಆರ್ಭಟಿಸುತ್ತಿದ್ದ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಪರಿಣಾಮ ಗಂಗಾವಳಿ, ಅಘನಾಶಿನಿ, ವರದಾ ಹಾಗೂ ಗುಂಡಬಾಳ ಮತ್ತು ಭಾಸ್ಕೇರಿ ಹೊಳೆ ತೀರದ ಪ್ರದೇಶದಲ್ಲಿ‌ ಸೃಷ್ಟಿಯಾಗಿದ್ದ ಪ್ರವಾಹ ನಿಧಾನವಾಗಿ ಇಳಿಕೆಯಾಗುತ್ತಿದೆ. ಅಂಕೋಲಾ ಬಿಳಿಹೊಯ್ಗೆ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ್ದ ನೀರು ಕಡಿಮೆಯಾಗುತ್ತಿದೆ. ಆದರೆ, ತೀರಾ ತಗ್ಗು ಪ್ರದೇಶಗಳಲ್ಲಿರುವ ಜಮೀನುಗಳಲ್ಲಿ ನೆರೆ‌ ಪರಿಸ್ಥಿತಿ ಹಾಗೆ ಮುಂದುವರಿದಿದೆ.

ಮಳೆಯಿಂದಾಗಿ ನದಿ ಹಾಗೂ ಹಳ್ಳಗಳು ತುಂಬಿ ಹರಿಯುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಮುಂದುವರಿಸಲಾಗಿದೆ. ಜಲಾಶಯಗಳಲ್ಲಿ ಜಿಲ್ಲಾಡಳಿತ ಸೂಚಿಸಿದ ನೀರಿನ ಮಟ್ಟ ಕಾಯ್ದುಕೊಂಡು ಪ್ರವಾಹವಾಗದಂತೆ ಅಲ್ಪ ಪ್ರಮಾಣದಲ್ಲಿ ನೀರು ಹೊರಹಾಕಲಾಗುತ್ತಿದೆ. ಇನ್ನು ನದಿಗಳು ಉಕ್ಕಿ ಹರಿದ ಕಾರಣ ಹೊನ್ನಾವರ, ಕುಮಟಾದಲ್ಲಿ 11 ಕಾಳಜಿ ಕೇಂದ್ರ ತೆರೆಯಲಾಗಿದೆ. ಸುಮಾರು 360 ಜನರು ಆಶ್ರಯ ಪಡೆದಿದ್ದಾರೆ. ಆದರೆ, ಇಂದು ಮಳೆ ಹಾಗೂ ನೆರೆ ಕಡಿಮೆಯಾದ ಕಾರಣ ಎರಡು ಕಾಳಜಿ‌ ಕೇಂದ್ರದಿಂದ ಜನ ಮನೆಗೆ ತೆರಳಿದ್ದಾರೆ. ಇನ್ನು ಕಾಳಜಿ ಕೇಂದ್ರದಲ್ಲಿ ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ