Breaking News

ರಸ್ತೆ ಬದಿಯಲ್ಲಿ ಸಿಕ್ಕ 2 ಸಾವಿರ ಮುಖ ಬೆಲೆಯ ಗರಿ ಗರಿ ನೋಟುಗಳು?

Spread the love

ಬೆಂಗಳೂರು: ನಗರದ ಹೊರವಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್​​ಗಳಲ್ಲಿ ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳು ಸಿಕ್ಕಿವೆ.

 

ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರನ್ನ ಕರೆಯಿಸಿ ಬಾಕ್ಸ್ ಬಿಚ್ಚಿ ಪರಿಶೀಲಿಸಿದಾಗ ಕಂತೆ-ಕಂತೆ ನೋಟುಗಳು ದೊರಕಿದ್ದು, ಒಂದು ಕ್ಷಣ ದಂಗಾಗಿದ್ದಾರೆ.

ಸಂಪೂರ್ಣವಾಗಿ ಪರಿಶೀಲಿಸಿದಾಗ ಅವು ನಕಲಿ ನೋಟುಗಳು ಅನ್ನೋದು ಗೊತ್ತಾಗಿದೆ. ಯಾರೋ ಅಪರಿಚಿತರು ಈ ನೋಟುಗಳನ್ನು ಎಸೆದಿರಬಹುದು. ಸದ್ಯ ಈ ನಕಲಿ ನೋಟುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ