Breaking News

ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ

Spread the love

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ.

ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜ ಎಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್​ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ನವರಿಗೆ ಕೇವಲ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಕಳ್ಳತನ ಮಾಡುವುದು ಗೊತ್ತಿದೆಯೇ ಹೊರತು, ಭ್ರಷ್ಟಾಚಾರ ಮುಕ್ತ ಸರ್ಕಾರ ಇದ್ದಲ್ಲಿ ಮಾತ್ರ ಈ ರೀತಿಯ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬಹುದು ಮತ್ತು ದೆಹಲಿ ಮಾದರಿಯ ಸಾಲ ಮುಕ್ತ ಬಜೆಟ್​ಗಳನ್ನು ಘೋಷಿಸಬಹುದು ಎಂಬುದು ಗೊತ್ತಿಲ್ಲ. ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ಕೂಡಲೇ ಹೇಗಾದರೂ ಮಾಡಿ ವಸೂಲಿ ಮಾಡಿಕೊಳ್ಳಬೇಕು ಎಂಬ ದಾವಂತ ಕಾಂಗ್ರೆಸ್ ಶಾಸಕರುಗಳಲ್ಲಿ ಇರುವುದು ಬಿ. ಆರ್. ಪಾಟೀಲರ ಪತ್ರದಿಂದ ಸ್ಪಷ್ಟವಾಗುತ್ತಿದೆ ಎಂಬ ಅನುಮಾನ ರಾಜ್ಯದ ಜನತೆಯಲ್ಲಿ ಹಾಗೂ ನಮ್ಮಲ್ಲೂ ಕಾಡುತ್ತಿದೆ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸರ್ಕಾರದಲ್ಲಿ ಯೋಜನೆಗಳಿಗಾಗಿ ಯಾವುದೇ ಹಣವಿಲ್ಲ. ಶಾಸಕರುಗಳು ಅನುದಾನಕ್ಕಾಗಿ ಒತ್ತಾಯ ಮಾಡಬಾರದು ಎಂದು ಹೇಳುತ್ತಾರೆ. ಯೋಜನೆಗಳಲ್ಲಿ ಯಾವುದೇ ಕಮಿಷನ್ ಬಾರದ ಈ ಪರಿಸ್ಥಿತಿಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆಯೇ ಇವರಿಗೆ ಗಟ್ಟಿ. ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ. ಇದರಿಂದಾಗಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರಗಳಿಂದಾಗಿ ಪರಿತಪಿಸುವುದು ಗ್ಯಾರಂಟಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

Spread the loveಬೆಂಗಳೂರು, (ಸೆಪ್ಟೆಂಬರ್‌ 8): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ