Breaking News

ಪಂಚ ಗ್ಯಾರಂಟಿ ಯೋಜನೆ ಜಾರಿ ಹಿನ್ನೆಲೆ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದ D.C.M.

Spread the love

ಬೆಂಗಳೂರು : ರಾಜ್ಯ ಸರ್ಕಾರವು ಐದು ಚುನಾವಣಾ ಭರವಸೆಗಳ ಅನುಷ್ಠಾನ ಮಾಡಿರುವುದರಿಂದ ಆರ್ಥಿಕ ಅಡಚಣೆ ಉಂಟಾಗಿದೆ. ಹಾಗಾಗಿ, ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ, ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಕೋರಿಕೆಯಂತೆ (ಸರ್ಕಾರಿ ನೌಕರರ) ವರ್ಗಾವಣೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ದೂರು ನೀಡಿದ್ದಾರೆ. ಸಚಿವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, “ಭಾರಿ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರುವಂತೆ ಪ್ರಯತ್ನಿಸಬೇಕು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಉಚಿತ ಗ್ಯಾರಂಟಿಗಳನ್ನು ಈಡೇರಿಸಲು ಹಣಕಾಸಿನ ಅಡಚಣೆಯಾಗುವುದನ್ನು ಅರಿತುಕೊಳ್ಳಬೇಕು” ಎಂದು ತಮ್ಮ ಪಕ್ಷದ ಅಸಮಾಧಾನಿತ ಶಾಸಕರನ್ನು ಉದ್ದೇಶಿಸಿ ಹೇಳಿಕೆ ನೀಡಿದರು


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ