Breaking News

ಗೃಹ ಸಚಿವರ ನಿವಾಸದೆದುರು ಪ್ರತಿಭಟಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ

Spread the love

ಬೆಂಗಳೂರು: ಗೃಹ ಸಚಿವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಮೋರ್ಚಾದ 14 ಮಂದಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149 (ಕಾನೂನು ಬಾಹಿರವಾಗಿ ಒಗ್ಗೂಡುವಿಕೆ) ಆರೋಪದಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

 

ಪ್ರಕರಣದ ಹಿನ್ನೆಲೆ: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಕೆಲವು ಆರೋಪಿಗಳ ಕುರಿತ ಹಾಗೂ ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿಂಪಡೆಯಬೇಕೆಂದು ಆಗ್ರಹಿಸಿ ಗುರುವಾರ ಬೆಳಗ್ಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸದಾಶಿವನಗರದ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಸದಾಶಿವನಗರ ಠಾಣಾ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇದೇ ವೇಳೆ, “ಪರಮೇಶ್ವರ್‌ ಅವರು ತಮ್ಮ ಮಾತು ಹಿಂಪಡೆಯಬೇಕು. ಕಾಂಗ್ರೆಸ್ ಸರ್ಕಾರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿರುವ ಕಿರಾತಕರು, ಭಯೋತ್ಪಾದಕರಿಗೆ ಬೆಂಬಲ ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡುತ್ತೇವೆ” ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು.


Spread the love

About Laxminews 24x7

Check Also

ಗ್ರಾಪಂ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಗತ್ಯ

Spread the loveಆನೇಕಲ್​ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ