ನಿರಂತರ ಮಳೆಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಸೋರುತ್ತಿರುವ ಘಟನೆ ನಡೆದಿದೆ.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಎರಡನೇ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ.
ಆಸ್ಪತ್ರೆ ಕಟ್ಟಡ ಸೋರುತ್ತಿರುವ ಹಿನ್ನೆಲೆ ಅಲ್ಲಿಯ ಸಿಬ್ಬಂದಿಗಳು ಬಕೆಟ್, ಬುಟ್ಟಿಗಳನ್ನು ಇಟ್ಟಿದ್ದಾರೆ.
ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ವಿಭಾಗ ಇರುವ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ.ಗರ್ಭಿಣಿ, ಬಾಣಂತಿಯರು ಬೆಚ್ಚಗಿನ ವಾತಾವರಣದಲ್ಲಿ ಇರಬೇಕು.
ಈ ರೀತಿ ತಂಪಾದ ವಾತಾವರಣದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಕಷ್ಟ ಆಗುತ್ತೆ.
ಸಂಬಂಧ ಪಟ್ಟ ಅಧಿಕಾರಿಗಳು ಬೇಗ ದುರಸ್ತಿ ಮಾಡಿ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರ ಆಗ್ರಹವಾಗಿದೆ.
Laxmi News 24×7