Breaking News

ಬಿಜೆಪಿ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ ಬಿಡುಗಡೆ

Spread the love

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಆ ಮೂಲಕ ಸಿ ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ? ಎಂಬ ಅನುಮಾನ ಬಲವಾಗಿದೆ. ಸಿ ಟಿ ರವಿ ಅವರನ್ನು 2020 ರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.‌ ಇದೀಗ ಹೈಕಮಾಂಡ್ ಇಂದು ರಿಲೀಸ್ ಮಾಡಿರುವ ಪದಾಧಿಕಾರಗಳ ಪಟ್ಟಿಯಲ್ಲಿ ಸಿ ಟಿ ರವಿ ಅವರನ್ನು ಕೈಬಿಡಲಾಗಿದೆ.

ಬಿಜೆಪಿಯಲ್ಲಿ ಎರಡು ಹುದ್ದೆ ಅಲಂಕರಿಸುವ ಹಾಗಿಲ್ಲ ಎಂಬ ಕಾನೂನಿದೆ.‌ ಹಾಗಾಗಿಯೇ 2020ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಅಂದಿನ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸಿ ಟಿ ರವಿ ರಾಜೀನಾಮೆ ನೀಡಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವೇಳೆ ಇವರಿಗೆ ಗೋವಾ, ತಮಿಳು‌ನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳ ಉಸ್ತುವಾರಿಯನ್ನೂ ನೀಡಲಾಗಿತ್ತು. ಜೊತೆಗೆ ಪುದುಚೇರಿ ಮತ್ತು ಲಕ್ಷದ್ವೀಪಗಳ ಸಂಘಟನಾ ಜವಾಬ್ದಾರಿ ಕೂಡ ವಹಿಸಲಾಗಿತ್ತು. ಇನ್ನು ಗೋವಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿತ್ತು. ಆಗ ಕೈ ಶಾಸಕರನ್ನು ಸೆಳೆಯುವಲ್ಲಿ ಸಿ ಟಿ ರವಿ ಕಾರ್ಯತಂತ್ರ ರೂಪಿಸಿದ್ದರು. ಹಾಗೆಯೇ ತಮಿಳುನಾಡಿನ ಉಸ್ತವಾರಿ ವಹಿಸಿ ಪಕ್ಷ ಸಂಘಟನೆಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಎಐಎಡಿಎಂಕೆ ಜೊತೆ ಮೈತ್ರಿ ರಾಜಕೀಯ, ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯ ರೂಪುರೇಷೆ ಹೆಣೆಯುತ್ತಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈರನ್ನು ನೇಮಿಸುವಲ್ಲಿ ಸಿ ಟಿ ರವಿ ಪ್ರಮುಖ ಪಾತ್ರ ವಹಿಸಿದ್ದರು. ಮಹಾರಾಷ್ಟ್ರದಲ್ಲೂ ಕೂಡ ಉಸ್ತುವಾರಿ ವಹಿಸಿ ಕಾರ್ಯತಂತ್ರ ರೂಪಿಸಿದ್ದರು.

ಲೋಕಸಭೆ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿ ಟಿ ರವಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ, ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡುವ ಇರಾದೆ ಪಕ್ಷದ ವರಿಷ್ಠರದ್ದು ಎಂಬ ಮಾತುಗಳಿಗೆ ಇದೀಗ ಬಲವಾಗಿ ಕೇಳಿ ಬಂದಿದೆ. ಇತ್ತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಈ ಬಗ್ಗೆ ಸುಳಿವು ನೀಡಿ ಅಚ್ಚರಿ ಮೂಡಿಸಿದ್ದರು. ಜೊತೆಗೆ ಇತ್ತೀಚೆಗೆ ಸಿ ಟಿ ರವಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ