Breaking News

ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

Spread the love

ರಾಮನಾಥಪುರಂ (ತಮಿಳುನಾಡು): ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗೆ ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಗೌರವಿಸಿದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಾ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪಸ್ಥಿತರಿದ್ದರು.

ಶುಕ್ರವಾರ ರಾಮೇಶ್ವರಂನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಹಮ್ಮಿಕೊಂಡಿದ್ದ ‘ಎನ್‌ ಮಣ್​​ ಎನ್‌ ಮಕ್ಕಳ್​’ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ್ದರು. ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್​ ಶಾ, ಕಾಂಗ್ರೆಸ್ ಮತ್ತು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇಂದು ಗೃಹ ಸಚಿವರು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಕುರಿತ ಕೃತಿಯೊಂದನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ರಾಮೇಶ್ವರಂನ ಪೆಯ್ಕರುಂಬುನಲ್ಲಿರುವ ಎಪಿಜೆ ಅಬ್ದುಲ್​ ಕಲಾಂ ಅವರ ಮನೆಗೆ ಭೇಟಿ ಕುಟುಂಬದವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ಅವರ ಸ್ಮಾರಕಕ್ಕೂ ಭೇಟಿ ನೀಡಲಿದ್ದಾರೆ. ನಂತರ ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ಭೇಟಿ ನೀಡಿ, ಬಳಿಕ ಮಂಡಬಮ್‌ನಿಂದ ಮಧುರೈ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದಾರೆ.

‘


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ