Breaking News

1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡ ಹಾರೂಗೇರಿ ಪೊಲೀಸರು

Spread the love

ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ವಾಹನ ತಪಾಸಣೆ ನಡೆಸಿ 1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸರು ಹಾರೂಗೇರಿ ಕ್ರಾಸನಲ್ಲಿ ಮಹಾರಾಷ್ಟ್ರದ ಟಾಟಾ ಎಸ್ ವಾಹನವನ್ನು (ಸಂಖ್ಯೆ ಎಂಎಚ್13ಎಎನ್ 5310) ಅಡ್ಡಗಟ್ಟಿ ಆ ವಾಹನದಲ್ಲಿ 12 ಬ್ಯಾಟರಿಗಳು ಪತ್ತೆಯಾಗಿವೆ. ವಾಹನದಲ್ಲಿದ್ದ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಇತರ ಮೂವರೊಂದಿಗೆ ಸೇರಿ ಬ್ಯಾಟರಿ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಬಂಧಿಸಿ 1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದಲ್ಲದೇ ರೂ.2 ಲಕ್ಷ ಮೌಲ್ಯದ ಟಾಟಾ ಎಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಹಾರೂಗೇರಿ ಪೊಲೀಸ್ ಠಾಣೆ ಪಿಎಸ್ ಐ ಆರ್. ಆರ್. ಕಂಗ್ನೋಳಿ, ಪಿಎಸ್ ಐ ಜಿ. ಎಸ್. ಉಪ್ಪಿನ್ ಹಾಗೂ ಸಂಗಡಿಗರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪೊಲೀಸ್ ಇನ್ಸ್ ಪೆಕ್ಟರ್ ರವಿಚಂದ್ರ, ಡಿವೈಎಸ್ ಪಿ ಶ್ರೀಪಾದ್ ಜಾಡೆ ಅವರ ಮಾರ್ಗದರ್ಶನದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಎಸ್ಪಿ ಸಂಜೀವ್ ಪಾಟೀಲ್, ಹೆಚ್ಚುವರಿ ಎಸ್ಪಿ ವೇಣುಗೋಪಾಲ್ ಹಾರೂಗೇರಿ ಪೊಲೀಸರನ್ನು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ