Breaking News

ರಾಮತೀರ್ಥ ನಗರ ಕಾಲೋನಿಗೆಪಾಲಿಕೆ ಆಯುಕ್ತರ ಭೇಟಿ,

Spread the love

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರು ಇಂದು ವಾರ್ಡ್ ನಂ. 46ರಲ್ಲಿ ರಾಮತೀರ್ಥ ನಗರ ಕಾಲೋನಿಗೆ ಎಲ್ ಅಂಡ್ ಟಿ ಅಧಿಕಾರಿ ಹಾರ್ದಿಕ್ ದೇಸಾಯಿ ಹಾಗೂ ಕರ್ನಾಟಕ ನಾಗರಿಕ ನೀರು ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ರಾಮತೀರ್ಥ ನಗರದಲ್ಲಿ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ನೇತೃತ್ವದಲ್ಲಿ ಎಲ್ಲ ಇಲಾಖೆ ಸಿಬ್ಬಂದಿಯೊಂದಿಗೆ ಸಮೀಕ್ಷೆ ನಡೆಸಲಾಯಿತು. ಈ ಭಾಗದಲ್ಲಿ 24/7 ನೀರಿನ ಯೋಜನೆಗಾಗಿ ಎಲ್ ಆ್ಯಂಡ್ ಟಿ ಕಂಪನಿಯು ನೀರಿನ ಪೈಪ್ ಲೈನ್ ಹಾಕಿದ್ದರಿಂದ ರಸ್ತೆ ಹಾಳಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಆಯುಕ್ತರು ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ತಿಳಿಸಿದರು. ರಾಮತೀರ್ಥನಗರದ ಗಣೇಶ ಚೌಕ್, ಗೋಕಾಕ ಮುಖ್ಯರಸ್ತೆ, ರೆವಿನ್ಯೂ ಕಾಲೋನಿ,

ಶಿವಶಕ್ತಿ ಕಾಲೋನಿ, ಕೆಎಚ್‌ಬಿ ಕಾಲೋನಿ ಬಳಿಯ ಪ್ರದೇಶಗಳನ್ನು ಪರಿಶೀಲಿಸಿ ಮಳೆಗಾಲದಲ್ಲಿ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ರಸ್ತೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಉದ್ಯಾನ, ಚರಂಡಿಗಳಿಗೆ ಸಂಬಂಧಿಸಿದಂತೆ ಜನರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ರಾಮತೀರ್ಥನಗರ ಕಾರ್ಪೊರೇಟರ್ ಆಡ್ ಹನ್ಮಂತ್ ಕೊಂಗಲಿ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ