Breaking News

ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

Spread the love

ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ ಸ್ಕ್ರೂಡ್ರೈವರ್​ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ.

ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್​ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ್​ ಅವರಿಗೆ ಎದೆ, ಹೊಟ್ಟೆ, ಕಿವಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯ ಐ.ಸಿ.ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಜೈಲಿನಲ್ಲಿ ನಡೆದ ಈ ಘರ್ಷಣೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಎದರು ಬಿಗಿ ಪೊಲೀಸ್​​ ಭದ್ರತೆ ನಿಯೋಜಿಸಲಾಗಿದೆ


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ