Breaking News

ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ: ಬೊಮ್ಮಾಯಿ

Spread the love

ಬೆಳಗಾವಿ : “ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಅಧಿಕಾರಿಗಳ ವರ್ಗಾವಣೆಗಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲರೂ ವರ್ಗಾವಣೆ ದಂಧೆಯಲ್ಲಿದ್ದಾರೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ಇದೀಗ ವರ್ಗಾವಣೆ ದಂಧೆಯಲ್ಲಿ ಚೌಕಾಸಿ ನಡೆಯುತ್ತಿದೆ” ಎಂದು ಹೇಳಿದರು.

“ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎದುರಿಸುತ್ತೇವೆ. ಈಗಾಗಲೇ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಆಗಲಿದೆ” ಎಂದರು.

“ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ.‌ ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ” ಎಂದು ದೂರಿದರು.

“ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ ಪರಿಹಾರ ಕೊಡಬೇಕು. ಆದರೆ ಅದು ಸಾಧ್ಯವಾಗಿಲ್ಲ.‌ ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆಯೂ ಆಗಿಲ್ಲ.‌ ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ, ಸರ್ಕಾರ ಗಮನಿಸುತ್ತಿಲ್ಲ. ಯಾವ ಸಚಿವರೂ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ.‌ ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ” ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ